DISTRICT: ಚಿಕ್ಕಮಗಳೂರು: ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ವಿರುದ್ಧ ನಗರದ ಗಾಂಧಿ ಪ್ರತಿಮೆ ಮುಂದೆ ಬಹುಜನ ಸಮಾಜ ಪಕ್ಷದಿಂದ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಹಾಗೂ ಜೆಡಿಎಸ್ ಮುಖಂಡರಾದ ಹುಣಸೆಮಕ್ಕಿ ಲಕ್ಷ್ಮಣ, ಬಿಎಸ್ಪಿ ಗಂಗಾಧರ ಹರೀಶ್, ಸುಧಾ, ಪರಮೇಶ್ವರ್ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿದರು. ಬಿಎಸ್ಪಿ ಜಿಲ್ಲಾ ಅಧ್ಯಕ್ಷ ರಾಧಾಕೃಷ್ಣ ನೇತೃತ್ವ ವಹಿಸಿದ್ದರು.