DISTRICT: ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕೊರೋನಾ ಕೇಸ್ಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಅಗತ್ಯ ವಸ್ತಗಳ ಖರೀದಿ, ಬ್ಯಾಂಕಿಂಗ್ ಕಾರ್ಯ, ಮುಂಗಾರು ಪೂರ್ವ ಚಟುವಟಿಕೆ, ಮೂಲ ಸೌಲಭ್ಯಗಳ ನಿರ್ಮಾಣ ಚಟುವಟಿಕೆ ಇತ್ಯಾದಿಗಳಿಗೆ ಅನುಕೂಲವಾಗುವಂತೆ ಜೂ.7 ಬೆಳಗ್ಗೆ 6 ಗಂಟೆಯಿಂದ 14ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುವಂತೆ ಕೆಲವು ವಿನಾಯಿತಿಗಳಿರುವ ಜಿಲ್ಲಾಡಳಿತ ಹೊರಡಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಸೋಮವಾರ, ಬುಧವಾರ ಮತ್ತು ಗುರುವಾರದಂದು ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೧ ರವರೆಗೆ ತರಕಾರಿ, ಹಣ್ಣು-ಹಂಪಲು, ದಿನಸಿ, ಕೃಷಿಗೆ ಸಂಬಂಧಿಸಿದ ಅಂಗಡಿ ಮಳಿಗೆ ಮತ್ತು ದಾಸ್ತಾನು ಕೇಂದ್ರಗಳು, ಮೀನು ಮತ್ತು ಮಾಂಸದ ಮಳಿಗೆ, ಹಾಪ್ ಕಾಮ್ಸ್ ಮಳಿಗೆಗಳು, ವೈನ್ ಶಾಪ್‌ಗಳು ತೆರೆಯಲು, ಮಳೆಗಾಲಕ್ಕೆ ಮತ್ತು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರೈನ್ ಕೋಟ್, ಛತ್ರಿ, ಟಾರ್ಪಲ್ ಗಳು, ಬಟ್ಟೆ ಬರೆ, ಚಪ್ಪಲಿ, ಗಂಬೂಟು ಮುಂತಾದ ವಸ್ತುಗಳ ಅವಶ್ಯಕತೆ ಇರುವುದರಿಂದ ಇಂತಹ ವಸ್ತುಗಳ ಮಾರಾಟ ಮಳಿಗೆಯನ್ನು ತೆರೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ. ಕೃಷಿ ಪರಿಕರವಾದ ರಸಗೊಬ್ಬರವನ್ನು ರೈತರು ಈಗಾಗಲೇ ನಿಗದಿಪಡಿಸಿರುವ ದಿನಗಳಲ್ಲಿ ಖರೀದಿಸಲು ಹಾಗೂ ಖರೀದಿಸಿದ ಸ್ಥಳದಿಂದ ರೈತರ ಕೃಷಿ ಚಟುವಟಿಕೆಯ ಸ್ಥಳಕ್ಕೆ ಅದೇ ದಿನದಂದು ಸಾಗಿಸಲು ಅವಕಾಶ ಕಲ್ಪಿಸಲಾಗಿದೆ. ಸಾಗಾಣಿಕೆ ಸಮಯದಲ್ಲಿ ಅಧಿಕೃತ ರಶೀದಿಯನ್ನು ಹೊಂದಿರಬೇಕು. ಪಡಿತರ ನ್ಯಾಯಬೆಲೆ ಮಳಿಗೆಗಳು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಮಾತ್ರ ತೆರೆಯಲು ಅವಕಾಶವಿದೆ. ಆಸ್ಪತ್ರೆ, ಔಷಧಾಲಯ, ವೈದ್ಯಕೀಯ ಸೇವೆಗಳು, ಪೆಟ್ರೋಲ್ ಬಂಕ್ ಗಳು, ಎಲ್.ಪಿ.ಜಿ ಕೇಂದ್ರಗಳು ದಿನದ 24 ಗಂಟೆಯೂ ಸೇವೆ ಸಲ್ಲಿಸಲು ಅವಕಾಶವಿದೆ.