DISTRICT:
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಬಾಕಿ ಇರುವ ಪದವಿ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಪಡಿಸಿದ್ದು, ಏಪ್ರಿಲ್ 2021ರ ಪದವಿಯ 1, 3, 5 ಹಾಗೂ 7ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಆ.2ರಂದು ನಡೆಸಲು ಹಾಗೂ ಸ್ನಾತಕೋತ್ತರ ಪದವಿಯ 1 ಮತ್ತು 3ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಆ.5ರಂದು ನಡೆಸಲು ನಿರ್ಧರಿಸಲಾಗಿದೆ.
ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಸರ್ಕಾರ ಸೂಚಿಸಿರುವ ಕೋವಿಡ್ ನಿಯಮಾವಳಿ ಪಾಲನೆಯೊಂದಿಗೆ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂಚಿತವಾಗಿ ಮಾಹಿತಿ ನೀಡಿರುವ ವಿಶ್ವವಿದ್ಯಾನಿಲಯವು ಕಾಲೇಜುಗಳಿಗೆ ಪರೀಕ್ಷಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಸೂಚನೆಯಲ್ಲಿ ತಿಳಿಸಿದೆ.