DISTRICT:
ಮಂಗಳೂರು: ನೆರೆರಾಜ್ಯ ಕೇರಳದಲ್ಲಿ ಕೋವಿಡ್ ಪಾಸಿಟಿವಿಟಿ ಕಡಿಮೆಯಾಗದ ಹಿನ್ನೆಲೆಯಲ್ಲಿ ಈ ವಾರವೂ ದಕ್ಷಿಣ ಕನ್ನಡ ಜಿಲ್ಲಾದ್ಯಂತ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೆಂದ್ರ ತಿಳಿಸಿದ್ದಾರೆ.
ಆ.14 ಮತ್ತು 15ಕ್ಕೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ನೀಡಲಾಗಿದೆ. ಆ.14ರಂದು ನಡೆಯಬೇಕಿದ್ದ ಮಂಗಳೂರು ವಿವಿ ಪದವಿ ಪರೀಕ್ಷೆ ಕೂಡ ರದ್ದಾಗಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.