DISTRICT:
ದಾವಣಗೆರೆ: ರಾಜ್ಯದಲ್ಲಿ ಬಿ. ಎಸ್. ಯಡಿಯೂರಪ್ಪ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ಹೈಕಮಾಂಡ್ ಜೊತೆ ಒಪ್ಪಂದ ಮಾಡಿಕೊಂಡಿದ್ದರು ಎಂದು ಬಿಜೆಪಿ ಹಿರಿಯ ಶಾಸಕ ಎಸ್. ಎ. ರವೀಂದ್ರನಾಥ್ ಹೇಳಿದ್ದಾರೆ.
ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಧ್ಯಮದವರ ಜೊತೆ ದಾವಣಗೆರೆಯ ಶಿರಮಗೊಂಡನಹಳ್ಳಿಯಲ್ಲಿ ಮಾತನಾಡಿದ ಅವರು, ಒಪ್ಪಂದದಂತೆ ಯಡಿಯೂರಪ್ಪ ನಡೆದುಕೊಂಡು ಬಂದಿದ್ದಾರೆ ಎಂದು ತಿಳಿಸಿದರು.
ನುಡಿದಂತೆ ಯಡಿಯೂರಪ್ಪ ನಡೆದುಕೊಂಡಿದ್ದಾರೆ. ಎರಡು ವರ್ಷ ಮುಂಚೆ ಯಡಿಯೂರಪ್ಪ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಎರಡು ವರ್ಷ ಪೂರೈಸಿದ ನಂತರ ತಮ್ಮ ಮಾತಿನಂತೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಬಿಜೆಪಿ ಪಾರ್ಟಿ ಶಿಸ್ತಿನ ಪಾರ್ಟಿ ಅಂತ ತೋರಿಸಿಕೊಟ್ಟಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಸಚಿವ ಸ್ಥಾನ ನೀಡಿದರೆ ನಿಭಾಯಿಸಲು ಸಿದ್ಧನಿದ್ದೇನೆ. ಶಾಸಕ ರೇಣುಕಾಚಾರ್ಯ ಯಡಿಯೂರಪ್ಪ ಅವರ ಮಾನಸಪುತ್ರ ಆಗಿದ್ದರು. ಹೀಗಾಗಿ ಅವರಿಗೆ ಹೆಚ್ಚಿನ ಅನುದಾನ ನೀಡುತಿದ್ದರು. ಇನ್ನು ಮೇಲೆ ನಮಗೂ ಹೆಚ್ಚಿನ ಅನುದಾನ ಬರಲಿದೆ. ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತಲೇ ಅವರನ್ನ ಕುಟುಕಿದ ಶಾಸಕ ರವೀಂದ್ರನಾಥ್ ಅವರು ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದರು.