DISTRICT:
ರಾಮನಗರ: ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಜಿಲ್ಲೆಯ ಹಲವು ಪರೀಕ್ಷಾ ಕೇಂದ್ರಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಾಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೆಂಟ್ ಆನ್ಸ್ ಪ್ರೌಢಶಾಲೆ ಹಾಗೂ ಚನ್ನಪಟ್ಟಣದ ಚೆಕ್ಕೆರೆಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿ, ಪರೀಕ್ಷಾ ಕೇಂದ್ರದಲ್ಲಿ ಸಚಿವರೆ ಖುದ್ದು ಬೆಂಚ್ ಮೇಲೆ ಕುಳಿತು ಪರಿಶೀಲನೆ ಕೂಡ ಮಾಡಿದರು.
ಪರಿಶೀಲನೆಯ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಯಾಗಬೇಕು. ಪರೀಕ್ಷಾ ನೋಂದಣಿ ಸಂಖ್ಯೆ ವಿದ್ಯಾರ್ಥಿಗಳಿಗೆ ಗೋಚರವಾಗುವ ರೀತಿ ಪ್ರದರ್ಶನ ವಾಗಬೇಕು. ಈ ಬಾರಿ ಪರೀಕ್ಷೆ ಓಎಂಆರ್ ಶೀಟ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಪರೀಕ್ಷಾ ನೋಂದಣಿ ಸಂಖ್ಯೆ ಸರಿಯಾಗಿ ವಿದ್ಯಾರ್ಥಿಗಳು ನಮೂದಿಸಿರುವ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸುವಂತೆ ಸೂಚನೆ ನೀಡಿದರು.