DISTRICT: ಉಡುಪಿ : ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರಕಾರದಿಂದ 4 ಲಕ್ಷ ರೂ. ಪರಿಹಾರ ಲಭ್ಯವಿರುವ ಅರ್ಜಿಗಳು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ದೊರೆಯುತ್ತವೆ ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡು ತ್ತಿದ್ದು,ಅಂತಹ ಯಾವುದೇ ಯೋಜನೆ ಇಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ. ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರ್ಕಾರದಿಂದ 4 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು ಈ ಬಗ್ಗೆ ಅರ್ಜಿಗಳು ಜಿಲ್ಲಾಧಿಕಾರಿ ಕಛೇರಿಯಲ್ಲಿ ದೊರೆಯುತ್ತದೆ ಎಂದು ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದ್ದು, ಅಂತಹ ಯಾವುದೇ ಯೋಜನೆ ಇಲ್ಲವೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.