ಈ ಕ್ಷಣ :

ಕುಮಟಾ: ಬಿಜೆಪಿ ವತಿಯಿಂದ ಬಡ ಜನರಿಗೆ ಆಹಾರ ಸಾಮಗ್ರಿ ಕಿಟ್ ವಿತರಣೆ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 13:33 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಕಾರವಾರ: ದುಡಿದು ತಿನ್ನುವ ಶ್ರಮ ಜೀವಿಗಳ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಲಾಕ್ ಡೌನ್ ದಂತ ಸಂಕಷ್ಟದ ಸಮಯದಲ್ಲಿ ಆಹಾರ ಸಾಮಗ್ರಿಯನ್ನು ವಿತರಿಸುತ್ತಿದ್ದೇವೆ ಎಂದು ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು. ಅವರು ಕುಮಟಾ ತಾಲೂಕಿನ ಗಂಗಾವಳಿ ಗ್ರಾಮದ ಗಂಗಾಮಾತಾ ದೇವಾಲಯದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಶ್ರಮಿಕ ವರ್ಗದವರಿಗೆ ಆಹಾರ ಸಾಮಗ್ರಿ ಒಳಗೊಂಡ ಕಿಟ್ ವಿತರಿಸಿ ಮಾತನಾಡಿದರು. ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದರಿಂದ ನಿಯಂತ್ರಣಕ್ಕೆ ಬಂದಿದೆ.ಕಳೆದ ವರ್ಷ ರಿಕ್ಷಾ ಚಾಲಕರಿಗೆ ಮತ್ತು ತರಕಾರಿ ಬೆಳೆಗಾರರಿಗೆ ಸಹಾಯ ಮಾಡಿದ್ದೇನೆ.ಈಗಲೂ ಕ್ಷೇತ್ರದ ಜನರ ಸಂಕಷ್ಟಕ್ಕೆ ನಿಂತಿದ್ದೇನೆ ಎಂದು ದಿನಕರ ಶೆಟ್ಟಿ ಅವರು ಹೇಳಿದರು.ಇದರಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ನೆರವು ಇದೆ ಎಂದರು.ಜನರು ಕೋವಿಡ್ ನಿಯಮಗಳನ್ನು ಅನುಸರಿಸಿ ಸರಕಾರಕ್ಕೆ ಸಹಕರಿಸಬೇಕು ಎಂದು ಕರೆ ನೀಡಿದರು. ಬಿ.ಜೆ.ಪಿ.ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ, ಕೊರೋನಾ ಮಹಾಮಾರಿ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿಯ ವರು ಕೋವಿಡ್ ಲಸಿಕೆ ಪ್ರತಿಯೊಬ್ಬರಿಗೂ ಸಿಗುವಂತೆ ಲಸಿಕಾ ಅಭಿಯಾನ ಆರಂಭಿಸಿ ದ್ದಾರೆ ಎಂದರು.ಮಹಾಮಾರಿ ಕೊರೋನಾದಿಂದ ತೊಂದರೆಗೆ ಒಳಗಾದ ಬಡ ಕುಟುಂಬಗಳಿಗೆ ಪಕ್ಷದ ವತಿಯಿಂದ ಭೂತ ಮಟ್ಟದಲ್ಲಿ ಆಹಾರ ಸಾಮಗ್ರಿ ಕಿಟ್ ನೀಡುವ ಕಾರ್ಯಕ್ರಮ ಇದಾಗಿದೆ ಎಂದರು. ಬಿ.ಜೆ.ಪಿ.ಪಕ್ಷದ ಜಿಲ್ಲಾ ಪ್ರಭಾರಿ ನಾಗರಾಜ ನಾಯಕ ತೊರ್ಕೆ ಮಾತನಾಡಿ,ತಮ್ಮ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸಿ ನೆರವಾಗುವ ಶಾಸಕ ದಿನಕರ ಶೆಟ್ಟಿಯವರ ಕಾರ್ಯ ಅಭಿನಂದನಾರ್ಹವಾಗಿದೆ ಎಂದರು. ಈ ವೇಳೆ ನಾಡುಮಾಸ್ಕೇರಿ ಗ್ರಾಂ.ಪಂ.ಅಧ್ಯಕ್ಷೆ ಧನಶ್ರೀ ಅಂಕೋಲೆಕರ,ಗೋಕರ್ಣ ಗ್ರಾಂ.ಪಂ.ಅಧ್ಯಕ್ಷ ಮಂಜುನಾಥ ಜನ್ನು,ತೊರ್ಕೆ ಗ್ರಾಂ.ಪಂ.ಅಧ್ಯಕ್ಷ ಆನಂದು ಕವರಿ,ಸದಸ್ಯ ರಾಜೇಶ ನಾಯಕ, ನಾಗರಾಜ ತಾಂಡೇಲ್,ದಯಾ ಮೆಹ್ತಾ, ಉದ್ಯಮಿ ನಾಗರಾಜ ಹಿತ್ತಲಮಕ್ಕಿ,ಸ್ಥಳೀಯ ಪಕ್ಷದ ಕಾರ್ಯಕರ್ತರು ಉಪಸ್ಥಿತ ರಿದ್ದರು. ನಾಡುಮಾಸ್ಕೇರಿ ಗ್ರಾ.ಪಂ.ವ್ಯಾಪ್ತಿಯ ಗಂಗಾವಳಿ ಮತ್ತು ದುಬ್ಬನಶಶಿಯ ಗ್ರಾಮಗಳಿಗೆ ೩೫೦ ಕಿಟ್ ವಿತರಿಸಲಾಗಿದೆ.ಮುಂದಿನ ದಿನಗಳಲ್ಲಿ ಗಂಗೆಕೊಳ್ಳ, ಹಾರುಮಾಸ್ಕೇರಿ,ಭಾವಿಕೊಡ್ಲ ಭಾಗದ ೫೦೦ ಬಡಕುಟುಂಬಕ್ಕೆ ಆಹಾರ ಸಾಮಗ್ರಿ ಕಿಟ್ ನೀಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45