ಈ ಕ್ಷಣ :

ಭಾವಿ ಮುಖ್ಯಮಂತ್ರಿ ಎನ್ನಬೇಡಿ: ಬೆಂಬಲಿಗರಿಗೆ ಪರಮೇಶ್ವರ್​​ ಮನವಿ

Published 15 ಮಾರ್ಚ್ 2023, 23:26 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಮೈಸೂರು: ನನ್ನನ್ನೂ ಭಾವಿ ಮುಖ್ಯಮಂತ್ರಿ ಎಂದು ಕಾರ್ಯಕರ್ತರು ಕೂಗುತ್ತಿದ್ದರು. ಹಾಗೆ ಕೂಗಬೇಡಿ ಎಂದು ಬುದ್ಧಿ ಹೇಳಿದ್ದೆ ಎಂದು ಮಾಜಿ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು. ಸುತ್ತೂರು ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಈಗಲೇ ಈ ವಿಚಾರ ಚರ್ಚೆ ಸರಿಯಲ್ಲ‌. ನಾವೆಲ್ಲಾ ಗೆಲ್ಲಬೇಕು, ಬಹುಮತ ಬರಬೇಕು ನಂತರ ಶಾಸಕರು ಅಭಿಪ್ರಾಯ ಹೇಳುತ್ತಾರೆ. ಇಲ್ಲಿಯವರೆಗೆ ಕಾಂಗ್ರೆಸ್ ಶಾಸಕರು ಶಾಸಕಾಂಗ ಸಭೆಯಲ್ಲಿ ನಿರ್ದಿಷ್ಟವಾಗಿ ಇವರೇ ಮುಖ್ಯಮಂತ್ರಿ ಎಂದು ಹೆಸರು ಸೂಚಿಸಿಲ್ಲ. ಕೇವಲ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ. ಇದೇ ಸಂಸ್ಕೃತಿ ಮುಂದೆಯೂ ಇರಲಿದೆ‌ ಎಂದು ತಿಳಿಸಿದರು. ನಮ್ಮ ಸ್ನೇಹಿತರು, ಹಿರಿಯರಲ್ಲಿ ಮನವಿ ಮಾಡುತ್ತೇನೆ‌. ಸಿಎಂ ವಿಚಾರದ ಚರ್ಚೆ ನಿಲ್ಲಿಸಿ, ಇದನ್ನು ಇನ್ನು ಬೆಳೆಸಬೇಡಿ ಎಂದು ಸಲಹೆ ನೀಡಿದರು. ನೀವೂ ಸಿಎಂ ಆಕಾಂಕ್ವಿಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಮಯ, ಸಂದರ್ಭ ಬಂದಾಗ ಅದನ್ನು ಹೇಳುತ್ತೇನೆ ಎಂದರು. ಕೋವಿಡ್‌ ಲಸಿಕೆ ಕುರಿತು ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ತಾವೇ ವ್ಯಾಕ್ಸಿನ್ ತಯಾರಿಸಿ ಹಂಚುತ್ತಿರುವ ರೀತಿ ವರ್ತಿಸುತ್ತಿರುವುದು ಸರಿಯಾದ ಕ್ರಮವಲ್ಲ. ಬಿಜೆಪಿ ಕಾರ್ಯಕರ್ತರೆ ಬೇಕಾದರೆ ತಮ್ಮ ಹಣದಲ್ಲಿ ಹಂಚಿ ಪ್ರಚಾರ ಪಡೆಯಲಿ. ಅದು ಬಿಟ್ಟು ಸರ್ಕಾರ ಹಂಚುತ್ತಿರುವ ವ್ಯಾಕ್ಸಿ‌ನ್‌ನಲ್ಲಿ ಪಕ್ಷದ ಪ್ರಚಾರ ಒಳೆಯದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣದಲ್ಲಿ ವಿಫಲವಾಗಿವೆ. ಕೋವಿಡ್ ನಿಯಂತ್ರಣದ ಪೂರ್ವ ಸಿದ್ಧತೆ ಸರಿಯಾಗಿ ಮಾಡಲಿಲ್ಲ. ಖಾಸಗಿ ಆಸ್ಪತ್ರೆಗಳನ್ನು ಇನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದು ಸರ್ಕಾರದ ವಿಫಲತೆ. ಇದರಿಂದ ಹೆಚ್ಚಿನ ಸಾವುಗಳು ಆದವು ಎಂದು ವಿಷಾದಿಸಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45