ಈ ಕ್ಷಣ :

ಸರ್ಕಾರಿ ಶಾಲೆ ಸೇರುವ ಮಕ್ಕಳಿಗೆ ಸಾವಿರ ರೂಪಾಯಿ : ಶಿಕ್ಷಕಿಯ ಸೇವೆಗೆ ತಂದೆಯೇ ಆದರ್ಶ

Published 16 ಮಾರ್ಚ್ 2023, 12:21 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ವರದಿ: ಮಲ್ಲಿಕ್ ಬೆಳಗಲಿ

ಬೆಳಗಾವಿ : ಕೊರೊನಾ ಸಂಕಷ್ಟ ಬಂದಾಗಿನಿಂದ ಶಿಕ್ಷಣ ಎನ್ನುವುದೇ ಈಗ ಸವಾಲಿನ ಕಾರ್ಯ ಆಗಿದೆ. ಇನ್ನು ಶಿಕ್ಷಣವನ್ನು ಉದ್ಯಮವಾಗಿ ಬಳಸಿಕೊಳ್ಳುತ್ತಿರುವ ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೆಳೆಯುವುದು ಸವಾಲಿನ ಕೆಲಸವೇ ಸೈ, ಇಂತಹ ಸವಾಲನ್ನು ಸ್ವೀಕರಿಸಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯೊಬ್ಬರು ಸರ್ಕಾರಿ ಶಾಲೆಯನ್ನ ಉಳಿಸಿ ಬೆಳೆಸಲು ಪ್ರಯತ್ನಿಸುತ್ತ ಯಶಸ್ವಿ ಕೂಡ ಆಗಿದ್ದಾರೆ.

ಬೆಳಗಾವಿಯ ಹೃದಯ ಭಾಗದಲ್ಲಿರುವ ಮಾರುಕಟ್ಟೆಯಲ್ಲಿರುವ ಪ್ರಾಥಮಿಕ ಶಾಲೆ ನಂಬರ್ 1 ಶಾಲೆಯ ಶಿಕ್ಷಕಿ ಶ್ರೀಮತಿ ವನಿತಾ. ವಿ. ಹಾಲಪ್ಪನವರ ಸದ್ಯ ತೆರೆಮರೆಯಲ್ಲಿ ಸರ್ಕಾರಿ ಕನ್ನಡ ಶಾಲೆಯ ಉಳಿವಿಗಾಗಿ ಹಾಗೂ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ತಮ್ಮ ಅನನ್ಯ ಸೇವೆ ಸಲ್ಲಿಸುತ್ತಿದ್ದಾರೆ, ಇದರಲ್ಲಿ ವಿಶೇಷ ಏನು ಅಂದ್ರೆ ಶಿಕ್ಷಕಿ ವನಿತಾ ತಮ್ಮ ಸ್ವಂತ ಹಣವನ್ನೇ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಾಗಿ ಬಳಸುತ್ತಿದ್ದಾರೆ.

ಸರ್ಕಾರಿ ಶಾಲೆ ಸೇರುವ ಮಗುವಿಗೆ ಸಾವಿರ ರೂಪಾಯಿ ಪ್ರೋತ್ಸಾಹ ಧನ

ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮಾರುಕಟ್ಟೆ ನಂ.1 ಶಾಲೆಯ ಪ್ರಥಮ ತರಗತಿ ಪ್ರವೇಶ ಪಡೆಯುವ ವಿದ್ಯಾರ್ಥಿ ಖಾತೆಗೆ ಒಂದು ಸಾವಿರ ರೂಪಾಯಿ ಹಣವನ್ನು ಮತ್ತು ಶಾಲಾ ಬ್ಯಾಗ್ ಮತ್ತು ನೋಟ್ ಬುಕ್ಸ್​​ಗಳನ್ನು ವನಿತಾ ಹಾಲಪ್ಪನವರ ನೀಡುತ್ತಿದ್ದಾರೆ, ಇನ್ನು 2ನೇ ತರಗತಿಯಿಂದ 7ನೇ ತರಗತಿ ವರೆಗೆ ಶಿಕ್ಷಣ ಪಡೆಯುವ ಬಡ ವಿದ್ಯಾರ್ಥಿಗಳ ನೋಟ್ ಬುಕ್, ಶಾಲಾ ಬ್ಯಾಗ್ ವೆಚ್ಚವನ್ನು ಕೂಡ ನೀಡುತ್ತಿದ್ದಾರೆ. ಅದಲ್ಲದೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮೇಲಾಧಿಕಾರಿಗಳಿಂದ ಆರ್ಥಿಕ ಸವಲತ್ತುಗಳನ್ನು ಕೂಡ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಇದೆ ರೀತಿ ಬಡ ಮಕ್ಕಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಸದಾ ಸೇವೆ ಸಲ್ಲಿಸುತ್ತಿರುವ ವನಿತಾ ಹಾಲಪ್ಪನವರ ಕಾರ್ಯ ಫಲಪ್ರಧವಾಗಿದೆ, ಈ ಹಿಂದೆಗಿಂತಲು ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಬರಲು ಆರಂಭಿಸಿದ್ದಾರೆ, ಇನ್ನು ಪ್ರಮುಖವಾಗಿ ಉಚಿತ ಟ್ಯೂಷನ್ ಕೂಡ, ಕಂಪ್ಯೂಟರ್ ಆಧರಿತ ಶಿಕ್ಷಣ ಹೀಗೆ ಒಬ್ಬ ವಿದ್ಯಾರ್ಥಿಗೆ ಬೇಕಾಗುವ ಎಲ್ಲಾ ರೀತಿಯ ಗುಣಮಟ್ಟದ ಶಿಕ್ಷಣದ ಜವಾಬ್ದಾರಿಯನ್ನ ತೆಗೆದು ಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ ಹಾಗಾಗಿ ಪೋಷಕರು ಹೆಚ್ಚು ಹೆಚ್ವು ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಲು ಮುಂದಾಗಿದ್ದಾರೆ.

ಶಿಕ್ಷಣ ಸೇವೆಗೆ ತಂದೆ-ತಾಯಿಯೇ ಸ್ಫೂರ್ತಿ

ವನಿತಾ ಹಾಲಪ್ಪನವರ ಮೂಲತಃ ಬೆಳಗಾವಿ ಜಿಲ್ಲೆಯ ಬೆಲ್ಲದ ಬಾಗೇವಾಡಿಯವರು, ತಂದೆ ಶಿಕ್ಷಣ ಇಲಾಖೆ ಅಧಿಕಾರಿ ಆಗಿ ಕಾರ್ಯ ನಿರ್ವಹಿಸಿದ್ದಾರೆ. ತಾಯಿ ಕೂಡ ಶಿಕ್ಷಕಿ ಆಗಿದ್ದವರು, ಈ ಹಿಂದೆ ತಮ್ಮ ತಂದೆ ತಾಯಿ ಅನೇಕ ಬಡ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸಹಾಯ ಮಾಡುತ್ತಿದ್ದರು ನನಗೆ ಅದು ಸ್ಫೂರ್ತಿ ಆಗಿತ್ತು, ನಾನು ಕೂಡ ಕಷ್ಟಪಟ್ಟು ಓದಿ, ಬೆಳಗಾವಿ ಜಿಲ್ಲೆ ಹಾಗೂ ದೂರದ ಬೆಂಗಳೂರು ಪಟ್ಟಣಗಳಲ್ಲಿ ಓದಿ ಶಿಕ್ಷಕಿಯಾಗಿ ಬಂದವಳು ಸಾಧ್ಯವಾದಷ್ಟು ಮಕ್ಕಳಿಗೆ ಸಹಾಯ ಮಾಡಿ ಸರ್ಕಾರಿ ಶಾಲೆಗಳನ್ನ ಉಳಿಸಿ ಬೆಳೆಸುವುದೇ ನನ್ನ ಗುರಿ ಎಂದು ಮಾಹಿತಿ ನೀಡಿದ್ದಾರೆ.

ಸದ್ಯ ಶಿಕ್ಷಕಿ ವನಿತಾ ಹಾಲಪ್ಪನವರ ಕಾರ್ಯಕ್ಕೆ ಅಧಿಕಾರಿಗಳು, ಪೋಷಕರು, ಸಮಾಜದ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ವನಿತಾ ಹಾಲಪ್ಪನವರ ಅಂತೆ ವಿದ್ಯಾವಂತ ಅಧಿಕಾರಿಗಳು ಪ್ರೋತ್ಸಾಹ ನೀಡಿದರೆ ಕನ್ನಡ ಶಾಲೆಗಳು ಮಕ್ಕಳಿಂದ ತುಂಬಿ ತುಳುಕುವಲ್ಲಿ ಸಂದೇಹವೇ ಇಲ್ಲ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45