DISTRICT:
ಮೈಸೂರು ; ರಷ್ಯಾ-ಉಕ್ರೇನ್ ಯುದ್ಧ ನಿರಂತರವಾಗಿ ಮುಂದುವರಿದಿದ್ದು, ಉಕ್ರೇನ್ ನಗರಗಳನ್ನು ವಶಪಡಿಸಿಕೊಳ್ಳಲು ರಷ್ಯಾ ದಾಳಿ ಮುಂದುವರಿಸಿದೆ.
ಮಂಗಳವಾರ, ಖಾರ್ಕಿವ್‌ನಲ್ಲಿ ರಷ್ಯಾ ವಾಯುದಾಳಿ ನಡೆಸಿ ಖಾರ್ಕಿವ್‌ನ ಪ್ರಧಾನ ಕಚೇರಿಯನ್ನು ಸ್ಫೋಟಿಸಿದೆ. ಈ ವೇಳೆ ನಡೆದ ವೈಮಾನಿಕ ದಾಳಿಯಲ್ಲಿ ನಮ್ಮ ರಾಜ್ಯದ ಹಾವೇರಿ ಜಿಲ್ಲೆಯ, ರಾಣೆಬೆನ್ನೂರು ತಾಲ್ಲೂಕಿನ ಚಲಗೇರಿಯ 20 ವರ್ಷದ ಯುವಕ ನವೀನ್ ಶೇಕರಪ್ಪ ಜ್ಞಾನಗೌಡರ್ ನಿಧನರಾಗಿದ್ದಾರೆ. ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಟ್ವೀಟ್ ಮೂಲಕ ಈ ಮಾಹಿತಿಯನ್ನು ತಿಳಿಸಿದ್ದಾರೆ.
ಮೃತ ನವೀನ್ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇಬೂರು ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2015-16ನೇ ಸಾಲಿನಲ್ಲಿ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯಲ್ಲೇ ಮೊದಲ ಸ್ಥಾನ (607 ಅಂಕಗಳು) ಪಡೆದಿದ್ದರು.
ನಂತರ ನಂಜನಗೂಡಿನ ಯೂನಿಟಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಡಿಸ್ಟಿಂಕ್ಷನ್‌ನಲ್ಲಿ ತೇಗರ್ಡೆಯಾಗಿದ್ದರು. ಓದಿನಲ್ಲಿ ಸದಾ ಮುಂದಿದ್ದ ನವೀನ್ ಮುಂದೆ ಡಾಕ್ಟರ್ ಆಗಬೇಕು ಎನ್ನುವ ಕನಸು ಕಂಡಿದ್ದ ಎಂದು ಸ್ನೇಹಿತರು ತಿಳಿಸಿದ್ದಾರೆ.