DISTRICT: ಚಿಕ್ಕಮಗಳೂರು: ಮಲೆನಾಡು ಹಾಗೂ ಕರಾವಳಿ ಭಾಗ ಸಹಿತ ರಾಜ್ಯದ ಹಲವೆಡೆ ಜೂ.14ರ ನಂತರ ಗುಡುಗು, ಸಿಡಿಲಬ್ಬರದೊಂದಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿಯಿಂದ ತಿಳಿದುಬಂದಿದೆ. ಮುಂಗಾರು ಈಗಾಗಲೇ ರಾಜ್ಯಕ್ಕೆ ಪ್ರವೇಶಿದೆ. ಆದರೆ ಹಲವು ಭಾಗದಲ್ಲಿ ಇನ್ನೂ ಮಳೆಯಾಗಿಲ್ಲ. ಕೆಲ ಜಿಲ್ಲೆಗಳಲ್ಲಿ ಆಗಾಗ ತುಂತುರು ಮಳೆ ಸುರಿಯತೊಡಗಿದೆ. ಇನ್ನೆರಡು ದಿನಗಳಲ್ಲಿ ರಾಜ್ಯದೆಲ್ಲಡೆ ಹೆಚ್ಚಿನ ಮಳೆ ಆರಂಭವಾಗಲಿದೆ. ಜೂ,14ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಚಿಕ್ಕಮಗಳೂರು ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಯಾದಗಿರಿ, ಬೀದರ್, ಬೆಳಗಾವಿ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾನಿ, ಅವಘಡಗಳು ಸಂಭವಿಸಬಹುದಾದ ಜಿಲ್ಲೆಗಳಲ್ಲಿ ಎಸ್ಡಿಆರ್ಎಫ್ ಸಿಬ್ಬಂದಿಯನ್ನು ನೇಮಿಸಲಾಗಿದೆ.