DISTRICT:
ಬೆಂಗಳೂರು: ಬೆಂಗಳೂರಿನ ಹೋಟೆಲ್ ಮಾಲೀಕರಿಗೆ ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರಿನಲ್ಲಿ ತಡರಾತ್ರಿ 1 ಗಂಟೆಯವರೆಗೆ ಹೋಟೆಲ್ ತೆರೆಯಲು ಅನುಮತಿ ನೀಡಿದ್ದಾರೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಾರ್ವಜನಿಕ ಸ್ಥಳಗಳಲ್ಲಿ ತಿಂಡಿ ತಿನಿಸುಗಳನ್ನು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಬೆಳಗ್ಗೆ 6 ರಿಂದ ತಡರಾತ್ರಿ 1 ರವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.