DISTRICT: ಧಾರವಾಡ: ಯೋಗ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಲು ಯೋಗ ಸಹಕಾರಿ, ಅಲ್ಲದೆ ಯೋಗ ವೈಯಕ್ತಿಕವಾಗಿ ಲಾಭಧಾಯವಾಗಿದೆ. ಯೋಗ ಮಾಡುವುದರಿಂದ ಮಾನಸಿಕ ನೆಮ್ಮದಿ ದೊರೆಯುವುದು. ಪ್ರತಿನಿತ್ಯ ಯೋಗ ಮಾಡುವರಿಗೆ ಕೊರೊನಾ ಹೆಚ್ಚಾಗಿ ಬಾಧಿಸಿಲ್ಲ. ಇದು ನನ್ನ ವೈಯಕ್ತಿಕ ಅನುಭವವೂ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಪಿರಾಮಿಡ್ ಧ್ಯಾನ ಮಂದಿರದಲ್ಲಿ ಆಯೋಜಿಸಲಾದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಶ್ವ ಸಂಸ್ಥೆಗೆ, ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸುವಂತೆ ಮನವಿ ಮಾಡಿದ್ದರು. ಇದಕ್ಕೆ ವಿಶ್ವ ಸಂಸ್ಥೆ ಮನ್ನಣೆ ನೀಡಿತು. ಇಂದು ಜಗತ್ತಿನಾದ್ಯಂತ ಬಹುತೇಕ ರಾಷ್ಟ್ರಗಳು, ಕೋಟ್ಯಾಂತರ ಜನರು ಯೋಗ ದಿನಾಚರಣೆ ಆಚರಿಸುತ್ತಿದ್ದಾರೆ. ಕೋವಿಡ್ ಸಾಂಕ್ರಮಿಕ ಹಿನ್ನಲೆಯಲ್ಲಿ ವರ್ಚುಯಲ್ ಮೂಲಕ ಯೋಗ ದಿನಾಚರಣೆ ಚಾಲನೆ ನೀಡಲಾಗಿದೆ. ಸೀಮಿತ ಸಂಖ್ಯೆಯಲ್ಲಿ ಧ್ಯಾನ ಮಂದಿರದಲ್ಲಿ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಾಗಿದೆ.ಈ ಬಾರಿ ಯೋಗ ದಿನಾಚರಣೆ ಘೋಷವಾಕ್ಯ "ಮನೆಯಲ್ಲಿ ಇದ್ದೇ ಯೋಗ ಮಾಡಿ"(Be with Yoga, Be at Home) ಆಗಿದೆ. ಜನರು ಪ್ರತಿನಿತ್ಯ ಯೋಗ ಮಾಡುವ ಹವ್ಯಾಸ ರೂಢಿಸಿಕೊಳ್ಳಬೇಕು. ಹುಬ್ಬಳ್ಳಿ ಧಾರವಾಡ ಜನತೆಗೆ ಯೋಗ ಹಾಗೂ ಧಾನ್ಯದ ಮಹತ್ವ ಸಾರಲು ಪಿರಾಮಿಡ್ ಧಾನ್ಯಮಂದಿರವನ್ನು ನಿರ್ಮಿಸಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.