DISTRICT:
ಕೊಡಗು : ಜಿಲ್ಲೆಯ ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆ ಮತ್ತು ಮಂಗಗಳ ಹಾವಳಿ ಮಿತಿ ಮೀರಿದ್ದು, ಅಪಾರ ಬೆಳೆಹಾನಿಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ವಿಎಸ್ಎಸ್ಎನ್ ಸಭಾಂಗಣದಲ್ಲಿ ವಸಂತ ಕುಮಾರ್ ಹೊಸಮನೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು. ಈ ವೇಳೆ ರೈತರು ವನ್ಯಜೀವಿಗಳ ಉಪಟಳದಿಂದ ಉಂಟಾಗಿರುವ ಸಂಕಷ್ಟದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.
ಕಾಡಾನೆ ದಾಳಿಯಿಂದ ತೋಟಗಳು ಸಂಪೂರ್ಣವಾಗಿ ನಾಶವಾಗುತ್ತಿದ್ದು, ಬೆಳೆಹಾನಿಯನ್ನು ಅತ್ಯಲ್ಪ ಪ್ರಮಾಣದಲ್ಲಿ ನೀಡಲಾಗುತ್ತಿದೆ.ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಬೆಳೆನಾಶವಾಗುತ್ತಿದ್ದು, ಅರಣ್ಯ ಇಲಾಖೆ ಯಾವುದೇ ಪರಿಹಾರ ನೀಡುತ್ತಿಲ್ಲ. ನಿಗದಿತ ಅವಧಿಯೊಳಗೆ ಕಾರ್ಯಾಚರಣೆ ಪೂರ್ಣಗೊಳಿಸಬೇಕು ಮತ್ತು ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಅಧಿಕಾರಿಗಳನ್ನು ಒತ್ತಾಯಿಸಿದರು.
ಈ ಸಭೆಯಲ್ಲಿ ಕೆ.ವಿಶ್ವನಾಥ್, ಟಿ.ಬಿ.ತಿಮ್ಮಯ್ಯ, ಕೆ ಎನ್ ವಾಸು, ಅನಿಲ್, ಜೋಸ್ ರಾಮಪುರಂ, ಟಿ.ಪಿ.ನಂಜಪ್ಪ, ಎ.ಕೆ.ಅಬ್ದುಲ್ಲ, ಹಕೀಂ, ದಮಯಂತಿ, ಗಣಪತಿ, ವಿಮಲಾ ಅಯ್ಯಪ್ಪ, ಲವ, ಜಯಕುಮಾರ್, ಕಿಶೋರ್, ಚಂದ್ರು ಮತ್ತಿತರರು ಉಪಸ್ಥಿತರಿದ್ದರ