DISTRICT: ಕೊಡಗು : ಪೊಲೀಸರ ಹಲ್ಲೆಯಿಂದ ಮೃತಪಟ್ಟ ವಿರಾಜಪೇಟೆಯ ರಾಯ್ ಡಿಸೋಜ ಅವರ ಮನೆಗೆ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮತ್ತಿತರ ಪ್ರಮುಖರು ಭೇಟಿ ನೀಡಿ ಮೃತರ ತಾಯಿ ಮೆಟೆಲ್ಲಾ ಲೋಬೊ ಹಾಗೂ ಸಹೋದರ ರಾಬಿನ್ ಡಿಸೋಜಾ ಅವರಿಗೆ ಸಾಂತ್ವನ ಹೇಳಿದರು. ಫೋನ್ ಮೂಲಕ ತಾಯಿಯೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘಟನೆಗೆ ವಿಷಾದ ವ್ಯಕ್ತಪಡಿಸಿದರು. ಪೊಲೀಸರ ಅಮಾನತ್ತಾಗಿದ್ದರೂ ಹೋದ ಜೀವವನ್ನು ತಂದುಕೊಡಲು ಸಾಧ್ಯವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದಲ್ಲಿ ಚರ್ಚಿಸಿ ನ್ಯಾಯ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು. ತಾಯಿ ಮೆಟೆಲ್ಲಾ ಲೋಬೊ ಮಾತನಾಡಿ ಪುತ್ರ ರಾಯ್ ಅನುಭವಿಸಿದ ನೋವನ್ನು ಮಾಜಿ ಮುಖ್ಯಮಂತ್ರಿಗಳ ಬಳಿ ವಿವರಿಸಿ, ಕಣ್ಣೀರು ಹಾಕಿದರು. ಪೊಲೀಸರನ್ನು ಅಮಾನತು ಮಾಡಿದರೆ ಸಾಲದು ಹುದ್ದೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು. ಮಗ ತಪ್ಪು ಮಾಡಿದ್ದರೆ ಲಾಕ್ ಅಪ್ ನಲ್ಲಿಡಬಹುದಿತ್ತು, ಆದರೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದರು. ಜೆಡಿಎಸ್ ವಿರಾಜಪೇಟೆ ಕ್ಷೇತ್ರ ಸಮಿತಿ ಅಧ್ಯಕ್ಷ ಮತೀನ್ ಎಸ್.ಹೆಚ್, ತಾಲ್ಲೂಕು ಅಧ್ಯಕ್ಷ ಮಂಜುನಾಥ್, ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಾಶಿರ್, ಪ್ರಮುಖರಾದ ಮಜೀದ್ ಚೋಕಂದಲ್ಲಿ, ಯೋಗೇಶ್ ನಾಯ್ಡು, ಸೈಫು, ಫತಹ್ ಮತ್ತಿತರರು ಹಾಜರಿದ್ದರು. [video width="640" height="368" mp4="http://24x7livekannada.com/wp-content/uploads/2021/06/royd.mp4"][/video]