DISTRICT:
ಮಡಿಕೇರಿ: ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಅಲ್ಲಿಂದ ಬರುವ ಪ್ರವಾಸಿಗರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಕೇರಳ, ಕೊಡಗು ಗಡಿಯಲ್ಲಿ ತಪಾಸಣೆ ನಡೆಸಿ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಬೇಕೆಂದು ರಾಜ್ಯ ಸರ್ಕಾರ ತಿಳಿಸಿದೆ. ಆದರೆ ಕೇರಳ, ಕೊಡಗು ಗಡಿಯಲ್ಲಿ ಯಾವುದೇ ತಪಾಸಣೆ ನಡೆಯುತ್ತಿಲ್ಲ ಎಂದು ತಿಳಿದುಬಂದಿದೆ.
ಕೊಡಗು ಜಿಲ್ಲೆಯ ಕುಶಾಲನಗರ ಬಳಿಯ ಕೊಪ್ಪ ಚೆಕ್ಪೋಸ್ಟ್ನಲ್ಲಿ ತಪಾಸಣೆ ಮಾಡಲು ಆರೋಗ್ಯ ಇಲಾಖೆ ಸಿಬ್ಬಂದಿ ಕಾಣೆಯಾಗಿದ್ದು, ಕೇರಳದಿಂದ ವಾಹನಗಳು ರಾಜಾರೋಷವಾಗಿ ಆಗಮಿಸುತ್ತಿವೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ.