DISTRICT:
ಮಂಡ್ಯ : 2009ರಲ್ಲಿ ನಡೆದಿದ್ದ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂದ ಮಂಡ್ಯದ ಇಬ್ಬರು ಹಾಲಿ ಹಾಗೂ ಒಬ್ಬರು ಮಾಜಿ ಶಾಸಕರು ಸೇರಿದಂತೆ 24 ಮಂದಿಗೆ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಮಂಡ್ಯ ನಗರಾಭಿವೃದ್ದಿ ಪ್ರಾಧಿಕಾರದ 107 ಅಕ್ರಮ ನಿವೇಶನ ಸಂಬಂಧ ಸಿಬಿಐ ದೋಷಾರೋಪಣ ಪಟ್ಟಿ ಸಲ್ಲಿಸಿತ್ತು.ಚಾರ್ಜ್ ಶೀಟ್ ಆಧಾರದ ಮೇಲೆ ಶಾಸಕರಾದ ಎಂ. ಶ್ರೀನಿವಾಸ್, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಸೇರಿದಂತೆ 24 ಮಂದಿಗೆ ಜುಲೈ 20 ರಂದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.