DISTRICT:
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.
ಮುಂದಿನ 2 ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕಳೆದ ವಾರದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ತಮಿಳುನಾಡಿನ ಚೆನ್ನೈ, ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಇನ್ನೂ 2 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.
ಕಳೆದೊಂದು ವಾರದಿಂದ ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿತ್ತು. ಮಳೆಯ ಜೊತೆ ಚಳಿಯೂ ಇತ್ತು. ಆದರೆ, ಗುರುವಾರದ ಬಳಿಕ ಮಳೆಯಾಗಿಲ್ಲ. ಚುಮು ಚುಮು ಚಳಿಯ ವಾತಾವರಣ ಮುಂದುವರೆದಿದೆ. ಮುಂಜಾನೆ ವೇಳೆ ಇಬ್ಬನಿಯೂ ಇದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 2 ದಿನಗಳ ಕಾಲ ಬೆಂಗಳೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.