DISTRICT:
ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಸ್ವಾಮೀಜಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಲಾಗುವುದು.
ಪ್ರಕರಣದ ಎ 1 ಮುರುಘಾ ಸ್ವಾಮೀಜಿ, ಎ2 ವಾರ್ಡನ್ ರಶ್ಮಿ, ಎ4 ಮ್ಯಾನೇಜರ್ ಪರಮಶಿವಯ್ಯ ನ್ಯಾಯಾಂಗ ಬಂಧನ ಇಂದು ಅಂತ್ಯವಾಗಲಿದೆ.
ಮೂವರನ್ನು ಚಿತ್ರದುರ್ಗ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಈ ಮೂವರನ್ನು ಹಾಜರುಪಡಿಸಲಾಗುವುದು.
ಇನ್ನು ಮುರುಘಾ ಶ್ರೀ ವಿರುದ್ಧ ಸುಳ್ಳು ದೂರು ದಾಖಲಿಸಲು ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಇಬ್ಬರು ಆರೋಪಿಗಳ ನಾಲ್ಕು ದಿನದ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಮಠದ ಶಾಲಾ ಶಿಕ್ಷಕನಾಗಿದ್ದ ಬೆಳಗಾವಿ ಮೂಲದ ಬಸವರಾಜೇಂದ್ರ ಮತ್ತು ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಇವರಿಬ್ಬರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಚಿತ್ರದುರ್ಗದ ಒಂದನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡುವ ಸಾಧ್ಯತೆ ಇದೆ. ಆರೋಪಿಗಳ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.