DISTRICT:
ಮೈಸೂರು: ವನ್ಯಜೀವಿ ಪ್ರಿಯರಿಗೊಂದು ಸಿಹಿ ಸುದ್ದಿ. ಕಳೆದ ಎರಡು ತಿಂಗಳಿಂದ ಬಂದ್ ಆಗಿದ್ದ ಬಂಡೀಪುರ ಸಫಾರಿ ಫುನರಾರಂಭಗೊಂಡಿದೆ.
ಬಂಡೀಪುರ ಹುಲಿಯೋಜನೆ ವ್ಯಾಪ್ತಿಯ ಪ್ರವಾಸೋದ್ಯಮ ಚಟುವಟಿಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಾಳೆಯಿಂದ ಬಂಡೀಪುರ ಸಫಾರಿ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಿರುವ ಬಂಡೀಪುರ ಹುಲಿಯೋಜನೆ ನಿರ್ದೇಶಕ ಎಸ್.ಆರ್.ನಟೇಶ್, ಸ್ಥಳದಲ್ಲೇ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.
ಜುಲೈ 5ರಿಂದ ಆನ್ಲೈನ್ ಬುಕ್ಕಿಂಗ್ ಸೇವೆ ಲಭ್ಯವಿರಲಿದೆ. ಕೊರೊನಾ ಮುಂಜಾಗ್ರತಾ ಕ್ರಮಗಳ ಮೂಲಕ ಸಫಾರಿ ಪುನರಾರಂಭ ಮಾಡಲಾಗುತ್ತದೆ. ಪ್ರವಾಸಿಗರು ಹಾಗೂ ವನ್ಯಪ್ರಿಯರು ಕೊರೋನಾ ಮಾರ್ಗಸೂಚಿ ಅನುಸರಿಸುವಂತೆ ಮನವಿ ಮಾಡಿದರು.