DISTRICT:
ಮೈಸೂರು: ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಜಯನಗರದಲ್ಲಿರುವ ಸುತ್ತೂರು ಮಠದ ಶಾಖಾ ಕೇಂದ್ರಕ್ಕೆ ತೆರಳಿದ ಡಿಸಿಎಂ ಅಶ್ವಥ್ ನಾರಾಯಣ್, ನೂತನ ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಅಂಶಗಳ ಬಗ್ಗೆ ಶ್ರೀಗಳಿಗೆ ವಿವರಿಸಿದರು.
ನೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀಗಳು, ಈ ವರ್ಷದಿಂದಲೇ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳಲ್ಲಿ ನೂತನ ಶಿಕ್ಷಣ ನೀತಿಯನ್ನು ಜಾರಿ ಮಾಡುವುದಾಗಿ ತಿಳಿಸಿದರು. ಇದು ಒಳ್ಳೆಯ ಆರಂಭ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಯುವಕರಿಗೆ ಗುಣಮಟ್ಟದ ಮತ್ತು ಭರವಸೆಯ ಶಿಕ್ಷಣ ನೀಡುವುದೂ ಸೇರಿ ಶಿಕ್ಷಣದ ಎಲ್ಲ ಹಂತಗಳಲ್ಲೂ ತಂತ್ರಜ್ಞಾನ ಬಳಕೆಯನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕು ಎಂದು ಸ್ವಾಮೀಜಿ ಅವರು ಮಾರ್ಗದರ್ಶನ ನೀಡಿದರು ಎಂಬುದಾಗಿ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.