DISTRICT:
ಕೋಲಾರ : ಬಂಗಾರಪೇಟೆಯ ಪಿಆರ್ಎಸ್ ರೈಸ್ ಮಿಲ್ ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ಪ್ರಕರಣ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಬಂಗಾರಪೇಟೆಯ ಪಿಆರ್ಎಸ್ ಅಗ್ರೋಟೆಕ್ ರೈಸ್ ಮಿಲ್ ಮಾಲೀಕ ಸೇರಿ 17 ಮಂದಿ ವಿರುದ್ಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು ಸುಮಾರು 2.81 ಕೋಟಿ ಮೌಲ್ಯದ ಪಡಿತರ ಅಕ್ಕಿ ಹಾಗೂ ಏಳು ವಾಹನಗಳು ವಶಕ್ಕೆ ಪಡೆಯಲಾಗಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರಹೊಸಹಳ್ಳಿ ಬಳಿ ಇರುವ ಪಿಆರ್ಎಸ್ ರೈಸ್ ಮಿಲ್ ಮೇಲೆ ಆಹಾರ ಇಲಾಖೆ ಜಂಟಿ ನಿರ್ದೇಶಕ ಪರಮಶಿವಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು ದಾಳಿ ಸಂದರ್ಭದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಹಾಗೂ ದಾಸ್ತಾನು ಮಾಡಿದ್ದು ಬೆಳಕಿಗೆ ಬಂದಿದೆ.
ರಾಜ್ಯ ತನಿಖಾ ದಳದ ಮುಖ್ಯಸ್ಥರಾಗಿರುವ ಜಂಟಿ ನಿರ್ದೇಶಕ ಕೆ ರಾಮೇಶ್ವರಪ್ಪ ಅವರಿಂದ ಪೊಲೀಸರಿಗೆ ದೂರು ನೀಡಿದ್ದು, ಬಂಗಾರಪೇಟೆ ಮೂಲದ ರೈಸ್ ಮಿಲ್ ಮಾಲೀಕ ಆರ್ ರಘುನಾಥ್ ಶೆಟ್ಡಿ, ನೌಕರರಾದ ಸಿ. ಮಂಜುನಾಥ್, ಬಿಎಂ ರಾಮು, ಚಿನ್ನಪ್ಪ, ವಾಹನಗಳ ಮಾಲೀಕರು ಮತ್ತು ಚಾಲಕರು ಕಾಳಸಂತೆಕೋರರ ಜೊತೆ ಶಾಮೀಲಾಗಿದ್ದಾರೆ ಎಂದು ತಿಳಿದು ಬಂದಿದಿದೆ.
ಕರ್ನಾಟಕ, ಆಂಧ್ರ ಹಾಗೂ ತಮಿಳುನಾಡಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಮಿಲ್ ನಲ್ಲಿ ಪಾಲಿಶ್ ಮಾಡಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಅಕ್ಕಿ ಗಿರಣಿ ಮಾಲೀಕರು ಮತ್ತು ವ್ಯಾಪಾರಿಗಳು, ಮಧ್ಯವರ್ತಿಗಳು ಸೇರಿ ಅಗತ್ಯ ವಸ್ತುಗಳ ಅಕ್ರಮ ಸಾಗಣೆ, ಕಾಳಸಂತೆಯಲ್ಲಿ ಮಾರಾಟ ಮಾಡಿ ಸರ್ಕಾರ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆಂದು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.