DISTRICT: ಬಾಗಲಕೋಟೆ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ಕೊಡಮಾಡಿದ 5 ಆಕ್ಸಿಜನ್ ಕಾನ್ಸಂಟ್ರೇಟ್ ರ್ ಗಳನ್ನು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ಮೂಲಕ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು. ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ , ಧರ್ಮಸ್ಥಳದ ವೀರೇಂದ್ರ ಹೆಗಡೆಯವರು ಕೋವಿಡ್ ಸಂಕಷ್ಠದ ಸಮಯದಲ್ಲಿ ಚಿಕಿತ್ಸೆಗೆ ಅನುಕೂಲವಾಗಲೆಂದು ಆಕ್ಸಿಜನ್ ಕಾಂನ್ಸಟ್ರೇಟರಗಳನ್ನು ಎಲ್ಲ ಜಿಲ್ಲೆಗಳಿಗೆ ನೀಡುತ್ತಿರುವುದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಮಹೇಶ ಎಮ್.ಡಿ, ಎಂ.ಐ.ಎಸ್ ಯೋಜನಾಧಿಕಾರಿ ಜ್ಯೋತಿ ಹೋಳದ ಸೇರಿದಂತೆ ಇತರರು ಉಪಸ್ಥಿತರಿದ್ದರು.