ಈ ಕ್ಷಣ :

ಅಂಬೇಡ್ಕರ್ ಗೆ ಅಪಮಾನ ಮತ್ತು ದಲಿತ ನಿಂದನೆ ವಿರುದ್ಧ ಪ್ರತ್ಯೇಕ ಪ್ರತಿಭಟನೆ

Published 16 ಮಾರ್ಚ್ 2023, 13:09 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ದೇವನಹಳ್ಳಿ: 73ನೇ ಗಣರಾಜೋತ್ಸವದ ಸಂದರ್ಭದಲ್ಲಿ ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ಅಂಬೇಡ್ಕರ್ ಅವರಿಗೆ ಅಗೌರವ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ  ಅವರನ್ನು ಸೇವೆಯಿಂದ ಅಮಾನತ್ತು ಮಾಡಿ ಅವರ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಎದುರು ಗುರುವಾರ ವಿವಿಧ ದಲಿತ ಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಬಾಬಾಸಾಹೇಬರಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶರು ಸಂವಿಧಾನಕ್ಕೆ ಮತ್ತು ಸಂವಿಧಾನದಡಿ ಕಾರ್ಯನಿರ್ವಹಿಸುವ ಸರ್ಕಾರಕ್ಕೆ ಮಾಡುವ ಅವಮಾನ ಅಂದರೆ ನೇರವಾಗಿ ಇದು ದೇಶದ್ರೋಹವೇ ಆಗಿದೆ. ಹೀಗಾಗಿ ಕರ್ನಾಟಕ ಉಚ್ಛನ್ಯಾಯಾಲಯವು ಸ್ವಯಂಪ್ರೇರಿತವಾಗಿ ಈ ವ್ಯಕ್ತಿಯ ಮೇಲೆ ಜಾತಿ ನಿಂದನೆ, ಪ್ರಕರಣ ದಾಖಲಿಸಬೇಕು ಸಮಾಜದಲ್ಲಿ ದ್ವೇಷಭಾವನೆ ಹರಡುವಿಕೆ ಮತ್ತು ದೇಶದ್ರೋಹದ ಕೇಸನ್ನು ದಾಖಲಿಸಿ ತಕ್ಷಣವೇ ಜೈಲಿಗಟ್ಟಬೇಕು ಎಂದು ದಲಿತ ಮುಖಂಡ ಕಾರಹಳ್ಳಿ ಶ್ರೀನಿವಾಸ ಒತ್ತಾಯಿಸಿದರು

ಆಲೂರು ದುದ್ದನಹಳ್ಳಿಯಲ್ಲಿ ಪ್ರತಿಭಟನೆ

ಅಲ್ಲದೆ ದೇವನಹಳ್ಳಿ ತಾಲ್ಲೂಕಿನ ಆಲೂರು ದುದ್ದನಹಳ್ಳಿಯಲ್ಲಿ ಖಾಸಗಿ ಶಾಲೆಯೊಂದರ ಮಾಲೀಕ ತನ್ನ ಸಿಬ್ಬಂದಿಯೊಂದಿಗೆ ಮಾತನಾಡಿದ್ದ ಸಂದರ್ಭದಲ್ಲಿ ದಲಿತರನ್ನು ನಿಂದಿಸಿ ಮಾತನಾಡಿದ್ದು ಎನ್ನಲಾದ ಆಡಿಯೋ ರೆಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದರಲ್ಲಿ ಮಾತನಾಡಿದ ವ್ಯಕ್ತಿಯ ವಿರುದ್ದ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

ಮಾರುತಿ ವಿದ್ಯಾಸಂಸ್ಥೆಯ ಪರವಾನಗಿ ರದ್ದುಗೊಳಿಸಿ ಆಲೂರು ದುದ್ದನಹಳ್ಳಿ ಖಾಸಗಿ ಶಾಲೆಯ ಮುಖ್ಯಸ್ಥರೊಬ್ಬರು ಜಾತಿಯ ವಿಚಾರವಾಗಿ ತುಚ್ಚವಾಗಿ ಮಾತನಾಡಿರುವುದು ಅಕ್ಷಮ್ಯ. ಇಂತಹ ಕೀಳು ಮನಸ್ಥಿತಿಯ ವ್ಯಕ್ತಿ, ಮಕ್ಕಳ ವಿದ್ಯಾಭ್ಯಾಸ ನೀಡುವ ಸಂಸ್ಥೆಯ ಮುಖ್ಯಸ್ಥನಾಗಿ ಮುಂದುವರಿದರೆ ಈ ಸಮಾಜದಲ್ಲಿ ಅಶಾಂತಿ ತಲೆದೋರಲಿದೆ ಅದ್ದರಿಂದ ಕೂಡಲೆ ಮಾರುತಿ ವಿದ್ಯಾಸಂಸ್ಥೆಯ ಪರವಾನಿಗೆಯನ್ನು ರದ್ದುಪಡಿಸಿಬೇಕು ಎಂದು ಪ್ರಜಾ ವಿಮೋಚನ ಚಳುವಳಿಯ ರಾಜ್ಯಾಧ್ಯಕ್ಷ ಮುನಿಯಾಂಜನಪ್ಪ  ಆಗ್ರಹಿಸಿದರು.

ರಾಯಚೂರಿನ ನ್ಯಾಯಾಧೀಶರು ಸಂವಿಧಾನದ ಮೂಲಕ ಪೀಠವನ್ನು ಅಲಂಕರಿಸಿದ್ದು, ಅದನ್ನೇ ಮರೆತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅಗೌರವ ತೋರಿರುವುದು ಖಂಡನೀಯ ಇಂಥ ದೇಶದ್ರೋಹ ಎಸಗಿದ ವ್ಯಕ್ತಿಯನ್ನು ದೇಶದಿಂದ ಗಡಿಪಾರು ಮಾಡಬೇಕು. ಹುದ್ದೆಯಿಂದ ಅಮಾನತುಗೊಳಿಸಿ ಅವರು ನ್ಯಾಯಾಧೀಶರಾದ ಮೇಲೆ ಗಳಿಸಿರುವ ಆಸ್ತಿ ವಿವರವನ್ನು ಪಡೆದು ತನಿಖೆ ನಡೆಸಿ ಅಕ್ರಮ ಸಂಪಾದನೆಯ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಪಿವಿಎಸ್ ಮುಖಂಡ ಅಯೂಬ್ ಖಾನ್ ಆಗ್ರಹಿಸಿದರು.

ಆಲೂರು ದುದ್ದನಹಳ್ಳಿಯ ಖಾಸಗಿ ಶಾಲೆಯೊಂದರ ಮಾಲೀಕ ತನ್ನ ಸಿಬ್ಬಂದಿಯೊಂದಿಗೆ ಫೋನಿನಲ್ಲಿ ಮಾತನಾಡಿದಾಗ ದಲಿತರನ್ನು ತುಚ್ಚವಾಗಿ ನಿಂದಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರ ವಿರುದ್ದ ಜನವರಿ 26ರ ಬುಧವಾರವೇ ದೂರು ನೀಡಿದ್ದರೂ ವಿಶ್ವನಾಥಪುರ ಠಾಣೆಯ ಪೋಲೀಸರು ದೂರು ದಾಖಲಿಸದೆ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಡಿವೈಎಸ್ಪಿ ಅಥವಾ ಉನ್ನತ ಮಟ್ಟದ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬಂದು ಖಾಸಗಿ ಶಾಲೆಯ ಮುಖ್ಯಸ್ಥನ ವಿರುದ್ಧ ಪ್ರಕರಣ ದಾಖಲಿಸುವ ಭರವಸೆ ನೀಡಬೇಕು ಎಂದು ಪಟ್ಟು ಹಿಡಿದರು.  ಬಳಿಕ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಅಪರ ಜಿಲ್ಲಾಧಿಕಾರಿ ವಿಜಯಾ ಇ ರವಿಕುಮಾರ್ ಮತ್ತು ಸಮಾಜ ಕಲ್ಯಾಣಾಧಿಕಾರಿ ಕೃಷ್ಣಪ್ಪ ಅವರುಗಳು ಪ್ರತಿಭಟನಾ ಸ್ಥಳಕ್ಕೆ ಬಂದು ಪ್ರಕರಣ ದಾಖಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದೊಡ್ಡಗೇರಿ ವೆಂಕಟೇಶ್, ಸೋಲೂರು ನಾಗರಾಜು, ಲೋಕೇಶ್, ಮೂರ್ತಿ, ಕಾಂತರಾಜ್, ಚನ್ನಮರಿಯಪ್ಪ, ಕಾರಹಳ್ಳಿ ಕೆಂಪಣ್ಣ, ಕದಿರಪ್ಪ,  ದೊಡ್ಡಸಾಗರಹಳ್ಳಿ ಮೂರ್ತಿ,  ಆಲೂರು ದುದ್ದನಹಳ್ಳಿ ಸತೀಶ್, ಮಹಿಳಾ ಘಟಕದ ರವಿಕಲಾ, ಅರುಂದತಿ, ಅರುಣಾ, ಯಲಹಂಕ ಮೂರ್ತಿ, ಕಾರ್ತಿಕ್, ವಕೀಲರುಗಳಾದ ನರಸಿಂಹಮೂರ್ತಿ, ಮುನಿರಾಜು, ಈರಣ್ಣ,  ಮತ್ತಿತರರು ಇದ್ದರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45