DISTRICT: ರಾಮನಗರ: ಜೂ.14 ಬಳಿಕ ಅನ್ ಲಾಕ್ ಮಾಡಲು ಸರ್ಕಾರ ನಿರ್ಧಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಮಗೆ ಸರ್ಕಾರ ಯಾವುದೇ ಸಲಹೆ ಕೇಳಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ನಮ್ಮ ಸಲಹೆ ಕೇಳದೇ ಅವರೇ ಕೆಲವು ತೀರ್ಮಾನಗಳನ್ನ ಮಾಡುತ್ತಿದ್ದಾರೆ. ಮೊದಲು ಜನರಿಗೆ ವ್ಯಾಕ್ಸಿನೇಷನ್ ಕೊಡಲಿ ಎಂಬುದು ನಮ್ಮ ಸಲಹೆಯಾಗಿದೆ ಎಂದರು. ದಿನೇ ದಿನೇ ರಾಜ್ಯದಲ್ಲಿ ಪೆಟ್ರೋಲ್ ದರ ಏರಿಕೆ ಹಿನ್ನೆಲೆ ಖಂಡಿಸಿ ನಾಳೆಯಿಂದ ಐದು ದಿನಗಳ ಕಾಲ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಈ ಬಗ್ಗೆ ಮಾತನಾಡಿದ ಡಿಕೆಶಿ, ಸಾಂಕೇತಿಕವಾಗಿ 5 ಸಾವಿರ ಕಡೆ ಬಂಕ್ ಗಳ ಮುಂದೆ ಪ್ರತಿಭಟನೆ ಮಾಡುತ್ತೇವೆ. ಪ್ರತಿ ಜಿಲ್ಲೆಗೂ ನಮ್ಮ ನಾಯಕರನ್ನ ನೇಮಿಸಿದ್ದೇನೆ. ಕೋವಿಡ್ ನಿಯಮಗಳನ್ನ ಪಾಲನೆ ಮಾಡಿಕೊಂಡು ಸಾಮಾಜಿಕ ಅಂತರ ಕಾಪಾಡಿ ಪೆಟ್ರೋಲ್ ಬಂಕ್‌ಗಳಲ್ಲಿ ಪ್ರತಿಭಟನೆ ಮಾಡುತ್ತೇವೆ. ಜಿಲ್ಲಾ ಮಟ್ಟದಲ್ಲಿ, ಪಂಚಾಯತಿ ವ್ಯಾಪ್ತಿಯಲ್ಲಿ 5 ದಿನ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದರು. ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂಬ ಅರುಣ್ ಸಿಂಗ್ ಹೇಳಿಕೆ ವಿಚಾರಕ್ಕೆ ಅವರವರ ಪಕ್ಷ ಏನು ಬೇಕಾದರು ಮಾಡಿಕೊಳ್ಳಲಿ ನಮಗೇನು ಆಗಬೇಕು ಎಂದು ವ್ಯಂಗ್ಯವಾಡಿದರು. ಮಾಜಿ ಶಾಸಕ ಬಾಲಕೃಷ್ಣ ಮುಂತಾದವರಿದ್ದರು. [video width="640" height="480" mp4="http://24x7livekannada.com/wp-content/uploads/2021/06/dksi.mp4"][/video]