DISTRICT:
ಮಂಗಳೂರು: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರಾಗಿದ್ದು ನಗರದ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕದ ಮನೆಯಲ್ಲಿ ಪ್ರಭಾಕರ್ ಅವರಿಗೆ ಮಂಗಳವಾರ ಸಂಜೆ 6 ಗಂಟೆಗೆ ಸುಸ್ತು ಕಾಣಿಸಿಕೊಂಡಿದ್ದು ತಪಾಸಣೆಗಾಗಿ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯದ ಬಗ್ಗೆ ನಿಗಾವಹಿಸಲು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಪ್ರಭಾಕರ್ ಭಟ್ ಅವರ ಆರೋಗ್ಯ ಸ್ಥಿರವಾಗಿದ್ದು, ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಆಸ್ಪತ್ರೆಗೆ ಭೇಟಿ ನೀಡಿದ್ದ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.