ಈ ಕ್ಷಣ :

ಶಿವಮೊಗ್ಗ: ಕೊರೋನಾ ಜೊತೆಗೆ ಡೆಂಗ್ಯೂ ಭೀತಿ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೋನಾ ಆತಂಕದ ನಡುವೆ ಡೆಂಗ್ಯೂ ಭೀತಿ ಎದುರಾಗಿದೆ. ಸಾಗರದಲ್ಲಿ ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿದ್ದು, ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಸೂಚಿಸಿದ್ದಾರೆ. ಡೆಂಗ್ಯೂ ನಿಯಂತ್ರಣ ಸಂಬಂಧ ಸಾಗರ ನಗರಸಭೆ ರಂಗಮಂದಿರ ಆವರಣದಲ್ಲಿ ಶಾಸಕ ಹರತಾಳು ಹಾಲಪ್ಪ ಅಧಿಕಾರಿಗಳ ಸಭೆ ನಡೆಸಿದರು. ತಕ್ಷಣದಿಂದ ಡೆಂಗ್ಯೂ ನಿಯಂತ್ರಣ ಮತ್ತು ಜಾಗೃತಿ ಕಾರ್ಯ ನಡೆಸುವಂತೆ ನಿರ್ದೇಶನ ನೀಡಿದ್ದಾರೆ. ಸಭೆಯಲ್ಲಿ ಮಾತನಾಡಿದ,ಶಾಸಕ ಹರತಾಳು ಹಾಲಪ್ಪ, “ತಾಲೂಕಿನಲ್ಲಿ ಕಳೆದ ತಿಂಗಳು 10 ಡೆಂಗ್ಯೂ ಪ್ರಕರಣ ಪತ್ತೆಯಾಗಿತ್ತು.ಜೂನ್‌ ತಿಂಗಳಲ್ಲಿ ಈಗಾಗಲೇ ೨೪ ಕೇಸ್‌ಗಳು ಪತ್ತೆಯಾಗಿವೆ. ಹಲವರು ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಪ್ರಕರಣಗಳ ನಿಖರ ಮಾಹಿತಿ ತಿಳಿಯುತ್ತಿಲ್ಲ. ಖಾಸಗಿ ಆಸ್ಪತ್ರೆ, ಲ್ಯಾಬ್ ಗಳಿಂದಲೂ ಡೆಂಗ್ಯೂ ಪ್ರಕರಣಕ್ಕೆ ಚಿಕಿತ್ಸೆ ಪಡೆದವರ ವಿವರ ಸಂಗ್ರಹಿಸಬೇಕು. ಸ್ಥಳೀಯ ಆಡಳಿತದ ಜೊತೆಗೆ ಆರೋಗ್ಯ ಇಲಾಖೆ ಕೈಜೋಡಿಸಿ, ಡೆಂಗ್ಯೂ ಕುರಿತು ನಗರ ಮತ್ತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಬೇಕು” ಎಂದರು. ಒಂದೇ ವ್ಯಕ್ತಿಗೆ ಡೆಂಗ್ಯೂ, ಕೊರೋನಾ ಸೋಂಕು 24 ಪ್ರಕರಣಗಳಲ್ಲಿ ಇಬ್ಬರಿಗೆ ಡೆಂಗ್ಯೂ ಜೊತೆಗೆ ಕೋವಿಡ್‌ ದೃಢಪಟ್ಟಿದೆ ಎಂದು ಸಿವಿಲ್‌ ಸರ್ಜನ್‌ ಡಾ.ಪ್ರಕಾಶ್‌ ಬೋಸ್ಲೆ ಸಭೆಯಲ್ಲಿ ಮಾಹಿತಿ ನೀಡಿದರು. ಗಾಂಧಿನಗರ,ವಿನೋಬನಗರ, ಎಸ್‌.ಎನ್‌.ನಗರ,ಸೂರನಗದ್ದೆ, ಸೊರಬ ತಾಲೂಕಿನ ಕ್ಯಾಸನೂರು ಸೇರಿದಂತೆ ಇನ್ನಿತರ ಭಾಗದಲ್ಲಿ ಡೆಂಗ್ಯೂ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.ಡೆಂಗ್ಯೂಗೆ ಸಕಾಲದಲ್ಲಿ ಚಿಕಿತ್ಸೆ ಲಭ್ಯವಿದೆ. ಜನರು ಭೀತಿಗೊಳ್ಳುವ ಆತಂಕವಿಲ್ಲ.ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು ಎಂದರು. ಸಾಗರ ಪಟ್ಟಣದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ.ಫಾಗಿಂಗ್‌ ಮಾಡುವುದು ಕ್ಯಾನ್ಸರ್‌ ಕಾರಕ ಎಂದು ಸುಪ್ರೀಂಕೋರ್ಟ್‌ ಹೇಳಿದೆ.ಹಾಗಾಗಿ ಫಾಗಿಂಗ್‌ ಬದಲು ಮೆಲಾಥಿಯಾನ್‌ ದ್ರಾವಣ ಸಿಂಪಡಣೆ ಮಾಡಲಾಗುತ್ತದೆ.ಅಲ್ಲದೆ ಜಾಗೃತಿಯನ್ನೂ ಮೂಡಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಹೆಚ್‌. ಕೆ.ನಾಗಪ್ಪ ಸಭೆಗೆ ತಿಳಿಸಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45