DISTRICT:
ಯಾದಗಿರಿ: ಹಿಜಾಬ್ ಕುರಿತು ಇಂದು ಹೈಕೋರ್ಟ್ ತೀರ್ಪು ನೀಡಿದೆ. ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋರ್ಟ್ ಆದೇಶವನ್ನು ಪಾಲಿಸಿ, ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಗೈರು ಹಾಜರು ಆಗೋದು ಬೇಡ ಅಂತಾ ಮನವಿ ಮಾಡಿದ್ದರು. ತೀರ್ಪು ಬೆನ್ನಲ್ಲೇ ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಬರೆಯೋದು ಬಿಟ್ಟು ಮನೆಗೆ ತೆರಳಿದ ಘಟನೆ ಕೆಂಬಾವಿ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದಿದೆ.
ಇಂದು ಸುರಪುರ ತಾಲೂಕಿನ ಕೆಂಬಾವಿ ಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿತ್ತು, ಇದೀಗ ಹೈಕೋರ್ಟ್ ನಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬಿಟ್ಟು ವಾಪಸ್ ಮನೆಗೆ ಹೋಗಿದ್ದಾರೆ.