ಈ ಕ್ಷಣ :

ದಾವಣಗೆರೆ ಜನರಿಗೆ ಸಿಹಿಸುದ್ದಿ: ಏಪ್ರಿಲ್ ನಿಂದ ಎಸ್‍ಟಿಪಿಐ ಉಪಕೇಂದ್ರ

Published 16 ಮಾರ್ಚ್ 2023, 13:09 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ದಾವಣಗೆರೆ: ಸದ್ಯದಲ್ಲಿಯೇ ದಾವಣಗೆರೆಯಲ್ಲಿ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾದ ಪ್ರಾರಂಭಗೊಳ್ಳಲಿದೆ. ಇದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಜಿಲ್ಲೆಯ ಜನರಿಗೆ ಏಪ್ರಿಲ್ ಮೊದಲ ವಾರದೊಳಗೆ ಉಪಕೇಂದ್ರವು ಉದ್ಘಾಟನೆಗೆ ಲಭ್ಯವಾಗುವಂತೆ ಮಾಡುವ ಪ್ರಯತ್ನಗಳೂ ಮುಂದುವರಿದಿವೆ. ಕೋವಿಡ್ ಪಾಸಿಟಿವ್ ಆದ ಕಾರಣ ಜಿಎಂಐಟಿ ಅತಿಥಿ ಗೃಹದಲ್ಲಿ ಐಸೋಲೇಷನ್‍ನಲ್ಲಿರುವ ಸಂಸದರು, ದಾವಣಗೆರೆ ಜೆ.ಹೆಚ್.ಪಟೇಲ್ ನಗರದಲ್ಲಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಸಿದ್ಧವಾಗುತ್ತಿರುವ ಎಸ್‍ಟಿಪಿಐ ಉಪಕೇಂದ್ರದ ಕುರಿತು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.

ಬಳಿಕ ಮಾತನಾಡಿದ ಸಂಸದ ಸಿದ್ದೇಶ್ವರ್ ಅವರು, ದಾವಣಗೆರೆ ಜಿಲ್ಲೆಯಲ್ಲಿ ಎಸ್‍ಟಿಪಿಐ ಉಪಕೇಂದ್ರ ಪ್ರಾರಂಭ ಆಗಬೇಕು ಎಂಬುದು ಜಿಲ್ಲೆಯ ಜನರ ಬಹುದಿನಗಳ ಕನಸು. ಇದೀಗ ನನಸಾಗುವ ಹಂತಕ್ಕೆ ಬಂದಿರುವುದು ಸಂತಸ ತಂದಿದೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಕ್ಯಾಂಪಸ್‍ನಲ್ಲಿ ತಾತ್ಕಾಲಿಕವಾಗಿ ಎಸ್‍ಟಿಪಿಐ ಉಪಕೇಂದ್ರದ ಪ್ರಾರಂಭಕ್ಕೆ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಸಂಸತ್ ಅಧಿವೇಶನ ಮುಗಿದ ಕೂಡಲೆ ಅಂದರೆ ಏಪ್ರಿಲ್ ಮೊದಲ ವಾರದಲ್ಲಿ ಉದ್ಘಾಟನೆಗೆ ಎಸ್‍ಟಿಪಿಐ ಉಪಕೇಂದ್ರ ಲಭ್ಯವಾಗಬೇಕು ಎಂದರು.

ದಾವಣಗೆರೆಗೆ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರ :
ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯದ ವತಿಯಿಂದ ದಾವಣಗೆರೆಗೆ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ ಅಫ್ ಇಂಡಿಯಾದ ಉಪಕೇಂದ್ರ ಏಪ್ರಿಲ್ ತಿಂಗಳಲ್ಲಿ ಉದ್ಘಾಟನೆಯಾಗಿ ಕಾರ್ಯ ಪ್ರಾರಂಭ ಮಾಡಲಿದೆ.

2.62 ಕೋಟಿ ರೂ. ಅನುದಾನ ವಿನಿಯೋಗಿಸುತ್ತಿದೆ. ರಾಜ್ಯದಲ್ಲಿ ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ ಯಲ್ಲಿ ಎಸ್‍ಟಿಪಿಐ ಉಪಕೇಂದ್ರಗಳಿದ್ದು, ದಾವಣಗೆರೆಯಲ್ಲಿ 4ನೇ ಉಪಕೇಂದ್ರ ಪ್ರಾರಂಭವಾಗಲಿದೆ.ದಾವಣಗೆರೆ ಜಿಲ್ಲೆ ಸ್ವಚ್ಛ, ಸುಂದರ ನಗರವಾಗಿದ್ದು, ವಿವಿಧ ಐಟಿ ಕಂಪನಿಗಳಿಗೆ, ದಾವಣಗೆರೆಯಲ್ಲಿ ಸಾರ್ಟ್‍ಅಪ್ ಕಂಪನಿಗಳು, ಆ್ಯಪ್ ಕಂಪನಿಗಳಿಗೆ ಇದರಿಂದ ಬಹಳಷ್ಟು ಅನುಕೂಲವಾಗಲಿದೆ. ಉಪಕೇಂದ್ರದಲ್ಲಿ 200 ಸಿಟಿಂಗ್ ಸಾಮರ್ಥ್ಯದ ಪ್ಲಗ್ ಅಂಡ್ ಪ್ಲೇ ಸೌಲಭ್ಯ ಒದಗಿಸಲಾಗುವುದು, ಅಲ್ಲದೆ ಹೈಸ್ಪೀಡ್ ಡಾಟಾ ಟ್ರಾನ್ಸಫರ್ , ಸಾರ್ಟ್‍ಅಪ್ ಇನ್‍ಕ್ಯೂಬೇಷನ್ ಸೆಂಟರ್ ವ್ಯವಸ್ಥೆ ದೊರಕಿಸಲಾಗುವುದು

ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್, ಹುಬ್ಬಳ್ಳಿ ಎಸ್‍ಟಿಪಿಐ ಕೇಂದ್ರದ ಜಂಟಿನಿರ್ದೇಶಕ ಸಸಿಕುಮಾರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರು ಹಾಗೂ ಜಿಪಂ ಉಪಕಾರ್ಯದರ್ಶಿ ಆನಂದ್, ಪ್ರಸನ್ನ, ಯಶವಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45