DISTRICT: ಉಡುಪಿ: ಉಡುಪಿಯಲ್ಲಿ ವ್ಯಕ್ತಿಯೊಬ್ಬರ ದೇಹಕ್ಕೆ ಲೋಹದ ವಸ್ತುಗಳು ಅಂಟಿಕೊಳ್ಳುತ್ತಿದ್ದು ಅಚ್ಚರಿಗೆ ಕಾರಣವಾಗಿದೆ. ಉಡುಪಿಯ ರಾಮ್ ದಾಸ್ ಶೇಟ್ ನಿನ್ನೆ ರಾತ್ರಿ ವಾಟ್ಸಾಪ್ ನಲ್ಲಿ ಬಂದ ವಿಡಿಯೋ ಒಂದನ್ನು ನೋಡಿ ತಾವೂ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಅಚ್ಚರಿ ಬಗ್ಗೆ ಗೊತ್ತಾಗಿದೆ. ಈ ವಿಷಯ ಸಾಮಾಜಿಕ ಜಾಲತಾಣದಲ್ಲೂ ಹರಿದಾಡಿ ವೈರಲ್ ಆಗಿತ್ತು. ಅವರ ದೇಹದಲ್ಲಿ ಅಯಸ್ಕಾಂತೀಯ ಲಕ್ಷಣ ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ವೈಧ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಹಣೆ, ಬೆನ್ನು, ಹೊಟ್ಟೆ, ಭುಜ, ಮೊಣಕೈ ಭಾಗದಲ್ಲಿ ಅಯಸ್ಕಾಂತೀಯ ಲಕ್ಷಣ ಕಂಡುಬಂದಿದೆ. ಆದರೆ ಅದು ಹೇಗೆಂಬುದನ್ನು ತಿಳಿಯಲು ಹೆಚ್ಚಿನ ಪರೀಕ್ಷೆಗೆ ಒಳಪಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.