ಈ ಕ್ಷಣ :

ಭಟ್ಕಳ: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಯಾಗಿಸುವ ಜಾಲ; ಓರ್ವನ ಬಂಧನ

Published 15 ಮಾರ್ಚ್ 2023, 22:38 IST
Last Updated 7 ಮೇ 2023, 00:03 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಕಾರವಾರ : ವೀಸಾ ಹೊಂದದೆ ಭಟ್ಕಳದಲ್ಲಿ ವಾಸ್ತವ್ಯ ಮಾಡಿದ ಆರೋಪಿ ಮಹಿಳೆಯನ್ನು ಪೊಲೀಸರು ಹೆಡೆಮುರಿ ಕಟ್ಟಿದ ಬೆನ್ನಲ್ಲೇ ಮತ್ತೊಂದು ಆಘಾತ ಕಾರಿ ಸುದ್ದಿ ಭಟ್ಕಳದಿಂದ ವರದಿಯಾಗಿದೆ. ಪಾಕ್ ಹಾಗೂ ಇತರೆಡೆಗಳಿಂದ ಬರುತ್ತಿದ್ದ ಫೋನ್ ಕಾಲ್ ಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಮಾಡುವ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿ,ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಭಟ್ಕಳ ತಾಲೂಕಿನ ನವಾಯತ್ ಕಾಲೋನಿಯ ತಕಿಯಾ ಸ್ಟ್ರೀಟ್ ನಿವಾಸಿ ನಿಸಾರ್ ಮಹಮ್ಮದ್ ಮುಕ್ತೇಸರ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಅನಧಿಕೃತ ಟೆಲಿಫೋನ್ ಎಕ್ಸ್​​​ಚೇಂಜ್ ಮೂಲಕ ಐಎಸ್​​ಡಿ ಕರೆಗಳನ್ನು ಸ್ಥಳೀಯ ಕರೆಗಳ ನ್ನಾಗಿ ಪರಿವರ್ತಿಸುವ ಜಾಲ ವನ್ನು ಬೆಂಗಳೂರಿನ ಬಿಟಿಎಂ ಲೇಔಟ್​​​​​​​​​​ನಲ್ಲಿ ಗುರುತಿಸಿ ಈ ಸಂಬಂಧ ಇಬ್ರಾಹಿಂ ಮತ್ತು ಗೌತಮ್ ಎಂಬುವವರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು.ಅವರ ಬಂಧನ ವಾಗುತ್ತಿದ್ದಂತೆ ನಿಸಾರ್ ಬೆಂಗಳೂರಿನಿಂದ ಭಟ್ಕಳಕ್ಕೆ ಬಂದಿದ್ದ ಎನ್ನಲಾಗಿದೆ. ಆರೋಪಿ ನಿಸಾರ್ ಒಂದೇ ಬಾರಿಗೆ 32 ಸಿಮ್ ಕಾರ್ಡ್​ಗಳನ್ನು ಬಳಸುವ ಸಿಮ್ ಬಾಕ್ಸ್ ಹೊಂದಿದ್ದ ಎಂದು ತಿಳಿದು ಬಂದಿದೆ. ಪಾಕಿಸ್ತಾನ,ಯುಎಇ ಸೇರಿದಂತೆ ವಿವಿಧ ದೇಶಗಳಿಂದ ಬರುವ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಾಡು ಮಾಡುವ ದಂಧೆಯಲ್ಲಿ ಆರೋಪಿಗಳು ತೊಡಗಿಸಿಕೊಂಡಿದ್ದರು.ಈ ಮೂಲಕ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದರು‌‌ ಎಂದು ಪ್ರಾಥಮಿಕ ಮಾಹಿತಿ ಯಲ್ಲಿ ಗೊತ್ತಾಗಿದೆ. ಈಗಾಗಲೇ ಆರೋಪಿಗಳಿಂದ 30 ಎಲೆಕ್ಟ್ರಾನಿಕ್ಸ್ ಉಪಕರಣ ಗಳಲ್ಲಿ ಅಳವಡಿಸಲಾಗಿದ್ದ,960 ಸಿಮ್ ಕಾರ್ಡ್ ಗಳನ್ನು ಜಪ್ತಿ ಮಾಡಿಕೊಂಡಿದ್ದ ಎಟಿಸಿ ಅಧಿಕಾರಿಗಳು ಮತ್ತೆ ಬಿಟಿಎಂ ಲೇಔಟ್‌ನಲ್ಲಿದ್ದ ಇಬ್ರಾಹಿಂಗೆ ಸೇರಿದ ಜಾಗದಿಂದ ಇನ್ನೂ 15 ಸಿಮ್ ಬಾಕ್ಸ್‌ಗಳನ್ನು ವಶಪಡಿಸಿ ಕೊಂಡಿದ್ದಾರೆ‌ ಎಂಬ ಮಾಹಿತಿ ಲಭ್ಯವಾಗಿದೆ‌. ಈ ಪ್ರಕರಣದಲ್ಲಿ ಬೆಂಗಳೂರಿ ನಲ್ಲಿ ಬಂಧಿತರಾಗಿರುವ ಇಬ್ರಾಹಿಂ ಹಾಗೂ ಗೌತಮ್ ಬಾಯ್ಬಿಟ್ಟ ಮಾಹಿತಿ ಆಧರಿಸಿ ಎಟಿಸಿ ತಮಿಳುನಾಡು‌ ಮೂಲದ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಅವರನ್ನು ನಗರಕ್ಕೆ ಕರೆತಂದಿದ್ದಾರೆ. ಇವರು ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಡಿಸಲು ಬೇಕಾದ ಸಿಮ್ ಕಾರ್ಡ್‌ಗಳನ್ನು ತಮಿಳುನಾಡು,ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಪಡೆದು ಕೋರಿಯರ್ ಮುಖಾಂತರ ತಲುಪಿಸುತ್ತಿದ್ದರು ಎಂದು ತಿಳಿದುಬಂದಿದೆ‌.ಈ ರೀತಿ ಇದುವರೆಗೂ ಎಷ್ಟು ಸಿಮ್ ಕಾರ್ಡ್‌ಗಳನ್ನು ಪಡೆಯಲಾ ಗಿದೆ ? ಈ ಕೃತ್ಯದಲ್ಲಿ ಇನ್ನಿತರರ ಪಾತ್ರಗಳ ಬಗ್ಗೆ ಆರೋಪಿ ಗಳಿಂದ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪಾಕಿಸ್ತಾನ,ದುಬೈನಿಂದ ಭಾರತೀಯ ಸೇನಾಧಿಕಾರಿಗಳ ಕಛೇರಿಗಳಿಗೆ ತಾವು ನಿವೃತ್ತ ಮಿಲಿಟರಿ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಫೋನ್ ಮಾಡುತ್ತಿದ್ದ ಅಪರಿಚಿತರು ಕರ್ನಲ್ ಸೇರಿದಂತೆ ಕೆಲ ಪ್ರಮುಖ ಮಿಲಿಟರಿ ಅಧಿಕಾರಿಗಳ ವಿಳಾಸ ಕೇಳುತ್ತಿದ್ದರು.ಉಗ್ರಗಾಮಿಗಳ ಜೊತೆ ನೇರವಾಗಿ ಸಂಪರ್ಕ ಹೊಂದಿದ್ದರಾ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ‌.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45