ಈ ಕ್ಷಣ :

ಅರೇಬಿಕ್ ಶಾಲೆಗಳಿಂದ ಶಿಕ್ಷಣ ಇಲಾಖೆ ಸೂಚನೆ ಉಲ್ಲಂಘನೆ

Published 16 ಮಾರ್ಚ್ 2023, 14:32 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಬೆಂಗಳೂರು: ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 200 ಅರೇಬಿಕ್ ಶಾಲೆಗಳ (ಮದರಸಾ) ಸ್ಥಿತಿಗತಿ ಹಾಗೂ ಕಾರ್ಯನಿರ್ವಹಣೆ ಕುರಿತು ಶೀಘ್ರ ವರದಿ ಸಲ್ಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ.

ಈ ಕುರಿತು ಮಡಿಕೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, 'ಅರೇಬಿಕ್ ಶಾಲೆಗಳನ್ನು ನಿಯಮಗಳಿಗೆ ಅನುಸಾರವಾಗಿ ನಡೆಸುತ್ತಿಲ್ಲ. ಭಾಷೆ ಮತ್ತು ವಿಜ್ಞಾನದ ಕಲಿಕೆಯೂ ಸಮರ್ಪಕ ರೀತಿಯಲ್ಲಿ ಇಲ್ಲ. ಈ ಬಗ್ಗೆ ಹಲವರು ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಮಗ್ರವಾಗಿ ಪರಿಶೀಲಿಸುವಂತೆ ಆಯುಕ್ತರಿಗೆ ಸೂಚಿಸಲಾಗಿದೆ' ಎಂದು ಅವರು ಹೇಳಿದರು.

'ಮದರಸಾಗಳಲ್ಲಿ ಕೆಲವೇ ಶಾಲೆಗಳು ಇಲಾಖೆಗಳು ಸೂಚಿಸಿರುವ ಪಠ್ಯಕ್ರಮ ಅನುಸರಿಸುತ್ತಿವೆ. ಆದರೆ ಬಹುತೇಕ ಶಾಲೆಗಳು ಶಿಕ್ಷಣ ಇಲಾಖೆ ಸೂಚನೆಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಮಗ್ರ ಪರಿಶೀಲನೆಯ ನಂತರ ವಾಸ್ತವ ಚಿತ್ರಣ ಏನೆಂದು ಸ್ಪಷ್ಟವಾಗುತ್ತದೆ' ಎಂದು ಅವರು ಅಭಿಪ್ರಾಯಪಟ್ಟರು. 'ಕರ್ನಾಟಕದಲ್ಲಿ 106 ಅನುದಾನಿತ ಹಾಗೂ 80 ಅನುದಾನರಹಿತ ಅರೇಬಿಕ್ ಶಾಲೆಗಳಿವೆ. ಈ ಶಾಲೆಗಳಲ್ಲಿ ಎಷ್ಟರಮಟ್ಟಿಗೆ ಇಲಾಖೆಯ ಸೂಚನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ ಎನ್ನುವುದನ್ನು ಸಮೀಕ್ಷೆಯ ವೇಳೆ ಪರಿಶೀಲಿಸಲಾಗುವುದು' ಎಂದು ಅವರು ವಿವರಿಸಿದರು.

'ಕರ್ನಾಟಕದ ಹಲವು ಅರೇಬಿಕ್‌ ಶಾಲೆಗಳಲ್ಲಿ ಕನ್ನಡ, ಇಂಗ್ಲಿಷ್​ನಂಥ ಭಾಷೆಗಳು ಹಾಗೂ ಗಣಿತ-ವಿಜ್ಞಾನದ ಬೋಧನೆ-ಕಲಿಕೆ ಸಮರ್ಪಕ ರೀತಿಯಲ್ಲಿ ಇಲ್ಲ ಎಂಬ ಅನುಮಾನವನ್ನು ಹಲವು ವ್ಯಕ್ತಪಡಿಸಿದ್ದಾರೆ. ಅರೇಬಿಕ್ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಮಕ್ಕಳು ದಾಖಲಾಗುತ್ತಾರೆ. ದಾಖಲೆಗಳಲ್ಲಿ ಕಾಣಿಸುವ ಈ ದಾಖಲಾತಿ ಸಂಖ್ಯೆಗೂ, ವಾಸ್ತವವಾಗಿ ಶಾಲೆಗಳಿಗೆ ಹಾಜರಾಗುವ ಮಕ್ಕಳ ಸಂಖ್ಯೆಗೂ ಭಾರೀ ವ್ಯತ್ಯಾಸವಿದೆ. ಶಿಕ್ಷಣವು ಎಲ್ಲ ಮಕ್ಕಳ ಹಕ್ಕಾಗಿದೆ. ಧರ್ಮದ ಕಾರಣಕ್ಕೆ ಯಾವುದೇ ಮಗು ಉತ್ತಮ ಶಿಕ್ಷಣದಿಂದ ವಂಚಿತವಾಗಬಾರದು' ಎಂದು ಅವರು ತಮ್ಮ ನಿಲುವು ಸ್ಪಷ್ಟಪಡಿಸಿದರು.

'ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯದ ಕಾರಣ ಮದರಸಾಗಳಲ್ಲಿ ಓದಿದ ಮಕ್ಕಳು ಇತರ ಶಾಲೆಗಳಲ್ಲಿ ಓದಿದ ಮಕ್ಕಳೊಂದಿಗೆ ಶೈಕ್ಷಣಿಕವಾಗಿ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಪ್ರಾಥಮಿಕ ಸಮೀಕ್ಷೆಯ ವೇಳೆ ಲಭ್ಯವಾದ ಮಾಹಿತಿಯನ್ನು ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ' ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45