DISTRICT:
ಬೆಂಗಳೂರು: ಹವಾಮಾನದಲ್ಲಿ ಉಂಟಾದ ಬದಲಾವಣೆಗಳಿಂದ ರಾಜ್ಯದ ಮೂರು ಭಾಗಗಳಲ್ಲಿ ಸುಮಾರು 20 ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಬಹಳಷ್ಟು ಕಡೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳುವ ನಿರೀಕ್ಷೆ ಇದೆ.
ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಪ್ರಕಾರ, ನವೆಂಬರ್ 16ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿತ್ತು. ಅದರಂತೆ ಸಮುದ್ರಮಟ್ಟದಲ್ಲಿ ವೈಪರೀತ್ಯ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಳೆ ಮತ್ತು ಮಬ್ಬು ವಾತಾವರಣ ಕಂಡು ಬಂದಿದೆ. ಕೆಲವೆಡೆ ಚಳಿಯು ಅಧಿಕವಾಗಿದೆ.
ರಾಜ್ಯದ ಹಲವೆಡೆ ನವೆಂಬರ್ 17ರವರೆಗೆ ಜೋರು ಮಳೆ ಬರುವ ಸಂಭವವಿದೆ. ಬೆಂಗಳೂರು ನಗರದಲ್ಲಿ ತುಂತುರು ಮಳೆ ಮುಂದುವರಿದಿದೆ.
ಇತ್ತ ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ರಾಜ್ಯಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ ಮತ್ತು ರಾಮನಗರದಲ್ಲಿ ಬುಧವಾರ ಗುಡುಗು ಸಹಿತ ಧಾರಾಕಾರವಾಗಿ ಮಳೆ ಅಬ್ಬರಿಸಲಿದೆ.
ರಾಜ್ಯ ಹಾಗೂ ಬೆಂಗಳೂರಿನಲ್ಲಿ ಇಂದಿನಿಂದ 2 ದಿನಗಳ ಕಾಲ ಈ ಮಳೆ ಸುರಿದು ಬಳಿಕ ಇಳಿಕೆ ಕಾಣುವ ಸಾಧ್ಯತೆ ಇದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಉಳಿದೆಡೆಗಿಂತ ತುಸು ಮಳೆ ಚುರುಕಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.