ಈ ಕ್ಷಣ :

ಮನೆ, ಬೆಳೆ ಹಾಗೂ ಮೂಲಸೌಕರ್ಯ ಹಾನಿ ಪರಿಶೀಲನೆ: ವಾರದಲ್ಲಿ ಕೇಂದ್ರಕ್ಕೆ ಸಮಗ್ರ ವರದಿ ಸಲ್ಲಿಕೆ: ಸುಶಿಲ್ ಪಾಲ್

Published 16 ಮಾರ್ಚ್ 2023, 12:34 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಬೆಳಗಾವಿ: ಇತ್ತೀಚಿನ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಪರಿಶೀಲನೆಗಾಗಿ ಜಿಲ್ಲೆಗೆ ಭೇಟಿ ನೀಡಿರುವ ಕೇಂದ್ರ ಅಧ್ಯಯನ ತಂಡವು ವಿವಿಧ ತಾಲ್ಲೂಕುಗಳಲ್ಲಿ ಸಂಚರಿಸಿ ನೆರೆಹಾನಿಯನ್ನು ಪರಿಶೀಲಿಸಿತು. ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸಂಚರಿಸಲಿರುವ ತಂಡವು ಮೊದಲ ದಿನ ಖಾನಾಪುರ, ಹುಕ್ಕೇರಿ ಹಾಗೂ ಗೋಕಾಕ ತಾಲ್ಲೂಕುಗಳಿಗೆ ಭೇಟಿ ನೀಡಿತು.

ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿರುವ ಕೇಂದ್ರ ಗೃಹ ಇಲಾಖೆಯ ಲೆಕ್ಕ ವಿಭಾಗದ ಮುಖ್ಯ ನಿಯಂತ್ರಣಾಧಿಕಾರಿ ಸುಶೀಲ್ ಪಾಲ್ ನೇತೃತ್ವದ ನೆರೆ ಅಧ್ಯಯನ ತಂಡವು ಮೊದಲಿಗೆ ನಗರದ ಪ್ರವಾಸಿಮಂದಿರದಲ್ಲಿ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಜಿಲ್ಲೆಯಲ್ಲಿ ಇತ್ತೀಚಿಗೆ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಕುರಿತು ಚರ್ಚೆ ನಡೆಸಿತು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಜಿಲ್ಲೆಯಲ್ಲಿ ಉಂಟಾಗಿರುವ ಮನೆ, ಬೆಳೆ ಹಾನಿಯ ಬಗ್ಗೆ ಹಾಗೂ ರಸ್ತೆ, ಸೇತುವೆ, ಶಾಲಾ ಕಟ್ಟಡಗಳು ಸೇರಿದಂತೆ ಇತರೆ ಮೂಲಸೌಕರ್ಯಗಳ ಹಾನಿಯ ಕುರಿತು ಛಾಯಾಚಿತ್ರಗಳ ಸಮೇತ ಪ್ರಾತ್ಯಕ್ಷಿಕೆಯನ್ನು ನೀಡಿದರು.

ಕೇಂದ್ರ ಅಧ್ಯಯನ ತಂಡದ ಸದಸ್ಯರಾದ ಕೇಂದ್ರ ಕೃಷಿ ಸಚಿವಾಲಯದ ನಿರ್ದೇಶಕರಾದ ಡಾ.ಕೆ.ಮನೋಹರನ್, ಇಂಧನ ಇಲಾಖೆಯ ಶುಭಂ ಗರ್ಗ್, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಮನೋಜ್ ಆರ್ಯ ಮತ್ತಿತರರು ಉಪಸ್ಥಿತರಿದ್ದರು.

ಖಾನಾಪುರ ತಾಲ್ಲೂಕಿಗೆ ಭೇಟಿ:

ಸಭೆಯ ಬಳಿಕ ಖಾನಾಪುರ ತಾಲ್ಲೂಕಿಗೆ ಭೇಟಿ ನೀಡಿದ ಕೇಂದ್ರ ಅಧ್ಯಯನ ತಂಡವು, ಅತಿವೃಷ್ಟಿಯಿಂದ ತೀವ್ರ ಹಾನಿಗೊಳಗಾದ ಮಾರುತಿನಗರದ ಬಳಿ ಮಲಪ್ರಭಾ ನದಿಯ ಬ್ರಿಡ್ಜ್ ಕಮ್ ಬ್ಯಾರೇಜ್ ವೀಕ್ಷಿಸಿದರು. ಇದಾದ ಬಳಿಕ ಪೌಲ್ಟ್ರಿ ಫಾರ್ಮ್ ಹಾಗೂ ಪೊಲೀಸ್ ತರಬೇತಿ ‌ಶಾಲೆಗೆ ಭೇಟಿ ನೀಡಿ, ಪರಿಶೀಲಿಸಿದರು.

ಹುಕ್ಕೇರಿ ತಾಲ್ಲೂಕಿನಲ್ಲಿ ಸಂಚಾರ:

ನಂತರ ಅತಿವೃಷ್ಟಿಯಿಂದ ‌ತೀವ್ರ ಹಾನಿ‌ ಸಂಭವಿಸಿರುವ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ತಂಡವು ತೋಟಗಾರಿಕೆ ಬೆಳೆಹಾನಿ, ಮನೆ ಹಾಗೂ ಮೂಲಸೌಕರ್ಯ ಹಾನಿಯನ್ನು ಪರಿಶೀಲಿಸಿತು. ಜಿನರಾಳ ಕ್ರಾಸ್ ‌ನಲ್ಲಿ ತೋಟಗಾರಿಕೆ ಬೆಳೆಹಾನಿ, ಬಡಕುಂದ್ರಿ ಹೊಳೆಮ್ಮ ದೇವಸ್ಥಾನದ ಬಳಿ ಹಿರಣ್ಯಕೇಶಿ ನದಿಪಾತ್ರದ ಮನೆಗಳು ಹಾಗೂ ಮೂಲಸೌಕರ್ಯ ಹಾನಿಯನ್ನು ವೀಕ್ಷಿಸಿದ ತಂಡವು ಹಾನಿಯ ‌ಕುರಿತು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿತು.

ಜೂನ್ ಎರಡನೇ ವಾರದಲ್ಲಿ ಬಿತ್ತನೆ ಮಾಡಲಾದ ಕ್ಯಾಬೇಜ್ ಬೆಳೆ‌ ಜುಲೈನಲ್ಲಿ ಸುರಿದ ಮಳೆಗೆ ಸಂಪೂರ್ಣ ಹಾಳಾಗಿದೆ. ಅದೇ ರೀತಿ ಟೊಮ್ಯಾಟೊ ಬೆಳೆ ಕೂಡ ಹಾನಿಯಾಗಿರುವುದಾಗಿ ರೈತರು ವಿವರಿಸಿದರು.

20 ಗುಂಟೆ ಜಮೀನಿನಲ್ಲಿ ಹನ್ನೆರಡು ಟನ್ ಇಳುವರಿ ಬರಬೇಕಿತ್ತು. ಮಳೆಯಿಂದಾಗಿ ಕೇವಲ ಎರಡು ಟನ್ ಕೂಡ ಬಂದಿಲ್ಲ.‌ ಮೂವತ್ತು ಸಾವಿರ ಖರ್ಚು ಮಾಡಲಾಗಿದೆ ಎಂದು ರೈತರು ಹೇಳಿದರು.

ಇದೇ ರೀತಿ ನೂರಾರು ಎಕರೆಯಲ್ಲಿರುವ ಟೊಮ್ಯಾಟೋ ಬೆಳೆ ಹಾನಿಯಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಮನೋಜ್ ಆರ್ಯ ಹಾಗೂ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವಿವರಿಸಿದರು.
ಹೊಳೆಯಮ್ಮ ದೇವಸ್ಥಾನದ ಆವರಣದಲ್ಲಿ ಅತಿವೃಷ್ಟಿ ಹಾನಿಗೆ ಸಂಬಂಧಿಸಿದ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿದರು.

ಹುಕ್ಕೇರಿ ತಾಲ್ಲೂಕಿನ ಯರನಾಳ, ಇಸ್ಲಾಂಪುರ, ಸುಲ್ತಾನಪುರ, ಹರಗಾಪುರ, ಗುಡಸ-ಹುಲ್ಲೊಳಿ ರಸ್ತೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ವಿವಿಧ ಹಾನಿಗೆ ಸಂಬಂಧಿಸಿದ ಛಾಯಾಚಿತ್ರಗಳನ್ನು ತಂಡದ ಸದಸ್ಯರು ವೀಕ್ಷಿಸಿದರು.

ಹಾನಿ ಕುರಿತು ಎಂಟತ್ತು ದಿನಗಳಲ್ಲಿ ಕೇಂದ್ರಕ್ಕೆ ಸಮಗ್ರ ವರದಿ-ಸುಶಿಲ್ ಪಾಲ್:

ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ‌ ಮಾತನಾಡಿದ ನೆರೆ ಅಧ್ಯಯನ ತಂಡದ ನೇತೃತ್ವ ವಹಿಸಿದ್ದ ಸುಶೀಲ್ ಪಾಲ್ ಅವರು, ಬೆಳಗಾವಿ ಜಿಲ್ಲೆಯಲ್ಲಿ ಉಂಟಾಗಿರುವ ಹಾನಿಯನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಸರಕಾರದ ಮಾರ್ಗಸೂಚಿ ಪ್ರಕಾರ ನೆರವು ಬಿಡುಗಡೆಗೆ ವರದಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.

ನೆರೆ ಅಧ್ಯಯನದ ಬಳಿಕ ಸಾಮಾನ್ಯವಾಗಿ ಎಂಟರಿಂದ ಹತ್ತು ದಿನಗಳೊಳಗೆ ದಿನದೊಳಗೆ ಕೇಂದ್ರ ಸರಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯಕ್ಕೆ ಮಾರ್ಗಸೂಚಿ ಪ್ರಕಾರ ಒಟ್ಟು 765 ಕೋಟಿ ಬಿಡುಗಡೆಗೆ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಮನೋಜ್ ಆರ್ಯ ಹೇಳಿದರು.

ಈ ಪ್ರಸ್ತಾಪವನ್ನು ಆಧರಿಸಿ ಮೂರು ಕೇಂದ್ರ‌ ಅಧ್ಯಯನ ತಂಡಗಳು ಭೇಟಿ ನೀಡಿ ಹಾನಿಯನ್ನು ಪರಿಶೀಲನೆ ಕೈಗೊಂಡಿವೆ. ಬೆಳೆಹಾನಿ ಜಂಟಿ ಸಮೀಕ್ಷೆ ಬಳಿಕ ಸೂಕ್ತ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ನಂತರ ಗೌಡವಾಡ ಗ್ರಾಮದಲ್ಲಿ ‌ಮನೆಗಳ‌ ಕುಸಿತ ಕುರಿತು ‌ಸಂತ್ರಸ್ತರ ಜತೆ‌ ಚರ್ಚೆ ನಡೆಸಿದ ತಂಡದ ಸದಸ್ಯರು ಮನೆ ಕುಸಿದಾಗ ತುರ್ತಾಗಿ ಆಶ್ರಯ ಪಡೆದಿರುವ ಬಗ್ಗೆ ತಿಳಿದುಕೊಂಡರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45