ಈ ಕ್ಷಣ :

ಸಾಹಿತ್ಯ ಸಾಧಕಿ ಗೊರೂರು ಪಂಕಜರಿಗೆ ಕರ್ನಾಟಕ ವಿಭೂಷಣ ಪ್ರಶಸ್ತಿ

Published 16 ಮಾರ್ಚ್ 2023, 14:27 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಗೊರೂರು ಪಂಕಜ, ಹಾಸನ ಜಿಲ್ಲೆಯ ಗೊರೂರಿನವರು. ಕೇಳಬೇಕೆ. ಅದು ಗೊರೂರು ರಾಮಸ್ವಾಮಿ ಅಯ್ಯಂಗಾರರರಂತಹ ಶ್ರೇಷ್ಠ ಸಾಹಿತಿ ಹುಟ್ಟಿದ ನೆಲ. ಅದೇ ಊರಿನಲ್ಲಿ ಜನಿಸಿದ ಪಂಕಜಾ ಸಾಹಿತ್ಯ ಕ್ಷೇತ್ರದಲ್ಲಿ ಸಾಧಿಸಿದ್ದು ಅಪಾರ. ಅಂತಹ ಸಾಧಕಿಯ ಸಾಧನೆಯನ್ನ ಗುರುತಿಸಿರುವ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಜನಪದ ಸಂಭ್ರಮ ಕಾರ್ಯಕ್ರಮದಲ್ಲಿ "ಕರ್ನಾಟಕ ವಿಭೂಷಣ" ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಇಂತಹ ಪ್ರಶಸ್ತಿಗೆ ಪಾತ್ರರಾಗಿರುವ ಈ ಲೇಖಕಿಯ ಬಗ್ಗೆ ಎರಡು ಸಾಲಿನಲ್ಲಿ ಹೇಳಿ ಮುಗಿಸುವಂತಹದ್ದಲ್ಲ.
ಗೊರೂರು ಪಂಕಜ ಅವರು, ಬರಹಗಾರ್ತಿ, ಕವಿಯತ್ರಿ, ಪತ್ರಕರ್ತೆ, ಸ್ತ್ರೀ ಸಂವೇದನೆಯ ಸಾಮಾಜಿಕ ಕಾರ್ಯಕರ್ತೆ, ಸ್ತ್ರೀ ಶಕ್ತಿ- ಸ್ವಸಹಾಯ ಗುಂಪುಗಳ ಸಂಘಟಕಿ, ಕಾರ್ಯಕ್ರಮಗಳ- ವಿಶೇಷವಾಗಿ ಸಾಂಸ್ಕೃತಿಕ ಸಾಹಿತ್ಯಿಕ, ಸಾಮಾಜಿಕ ಕಾರ್ಯಕ್ರಮಗಳ ನಿರೂಪಕಿ ಇತ್ಯಾದಿ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಪ್ರಾಮಾಣಿಕ ಮತ್ತು ದಕ್ಷ ‘ಕಾಯಕ’ ಗಳಿಂದಾಗಿ ಇವರನ್ನರಸಿಕೊಂಡು ಬಂದ ಪ್ರಶಸ್ತಿ-ಪುರಸ್ಕಾರ, ಗೌರವಗಳಿಗೆ ಲೆಕ್ಕವಿಲ್ಲ. 2008ರಲ್ಲಿ ಇವರ ವಿವಿಧ ಕ್ಷೇತ್ರಗಳ ಸೇವೆ ಮತ್ತು ಸಾಹಿತ್ಯಕ್ಕಾಗಿ ಒಂದೇ ವರ್ಷದಲ್ಲಿ ಸುಮಾರು 14 ಪ್ರಶಸ್ತಿಗಳನ್ನು ಗಳಿಸಿದ ಏಕೈಕ ಲೇಖಕಿ ಎಂದರೆ ತಪ್ಪಾಗಲಾರದು.

ಗೊರೂರು ಪಂಕಜ ಅವರು ಆಕಾಶವಾಣಿ ಕಲಾವಿದೆಯಾಗಿಯೂ ಕಳೆದ 20 ವರ್ಷಗಳಿಂದ ನಿಯಮಿತವಾಗಿ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ದೂರದರ್ಶನ ಮತ್ತು ಸ್ಥಳೀಯ ಚಾನಲ್ ಗಳಲ್ಲೂ ಕಾರ್ಯಕ್ರಮ ನೀಡಿದ್ದಾರೆ. ಈ ಕಿರಿಯ ವಯಸ್ಸಿಗೆ ಮಾಡಿರುವ ಸಾಧನೆ ಅಪಾರವಾದದ್ದು. ಇಂತಹ ಸಾಧನೆಗೆ ಅವರಿಗೆ ಕರ್ನಾಟಕ ವಿಭೂಷಣ ಪ್ರಶಸ್ತಿ ಲಭಿಸಿದ್ದು ಸಮಂಜಸವೇ.

ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಸತೀಶ್ ಕುಮಾರ್ ಹೊಸಮನಿ, ಲೇಖಕಿ ವಸುಂಧರಾ ಭೂಪತಿ, ಸುರ್ವೆ ಪತ್ರಿಕೆಯ ಸಂಪಾದಕರಾದ ಮಹೇಶ್ ಸುರ್ವೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45