ENTERTAINMENT:
ಬ್ಯಾಡ್ಮಿಂಟನ್ ಪಟು ಸೈನಾ ನೆಹ್ವಾಲ್ ಬಗ್ಗೆ ಕೆಟ್ಟದಾಗಿ ಪ್ರತಿಕ್ರಿಯಿಸಿದ ನಟ ಸಿದ್ದಾರ್ಥ್ ಕೊನೆಗೂ ಕ್ಷಮೆಯಾಚಿಸಿದ್ದಾರೆ. ಸಿದ್ದಾರ್ಥ್ ಟ್ವೀಟ್ಗೆ ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸಿದ್ದಾರ್ಥ್ ತಾವು ಮಾಡಿದ ತಪ್ಪನ್ನ ಒಪ್ಪಿಕೊಂಡು ಬಹಿರಂಗವಾಗಿಯೇ ಪತ್ರ ಬರೆದಿದ್ದಾರೆ. ಜೊತೆಗೆ ತಾವು ಬರೆದ ಕ್ಷಮಾಪಣ ಪತ್ರವನ್ನ ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.
ಈ ಬಗ್ರ್ಗೆ ಪ್ರತಿಕ್ರಿಯಿಸಿದ ನಟ ಸಿದ್ಧಾರ್ಥ್, ಸೈನಾ.. ಕೆಲವೇ ದಿನಗಳ ಹಿಂದೆ ನಿಮ್ಮ ಟ್ವೀಟ್ಗೆ ಪ್ರತಿಯಾಗಿ ನಾನು ಕೆಟ್ಟ ಜೋಕ್ ಮಾಡಿದ್ದಕ್ಕಾಗಿ ಕ್ಷಮೆ ಕೇಳುತ್ತೇನೆ. ನಿಮ್ಮ ಹಲವು ವಿಚಾರಗಳನ್ನು ನಾನು ವಿರೋಧಿಸಬಹುದು. ಆದರೆ ನನ್ನ ವಿರೋಧ ಹಾಗೂ ಸಿಟ್ಟು ಕೂಡ ನಾನು ಬಳಸಿದ ಪದಗಳು ಹಾಗೂ ಧಾಟಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಒಂದು ಜೋಕ್ ಅನ್ನು ವಿವರಿಸಬೇಕಾದ ಸಂದರ್ಭ ಬರುತ್ತದೆ ಎಂದಾದರೆ ಅದು ಒಳ್ಳೆಯ ಜೋಕ್ ಅಲ್ಲ. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಸಿದ್ದಾರ್ಥ್ ಟ್ವೀಟ್ ಮಾಡಿದ್ದಾರೆ.
ಪಂಜಾಬ್ನಲ್ಲಿ ಪ್ರಧಾನಿ ಮೋದಿ ಭದ್ರತ ಲೋಪ ಕುರಿತಂತೆ ಟ್ವೀಟ್ನಲ್ಲಿ ಸೈನಾ ನೆಹ್ವಾಲ್ ಖಂಡನೆ ವ್ಯಕ್ತಪಡಿಸಿದ್ದರು. ಪ್ರಧಾನಿಯ ಭದ್ರತೆಗೆ ಧಕ್ಕೆಯುಂಟಾದರೆ ಆ ದೇಶವು ತನನ್ನು ತಾನು ಸುರಕ್ಷಿತ ಎಂದು ಕರೆಯಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದರು.
ಅದಕ್ಕೆ ಪ್ರತಿಕ್ರಿಯಿಸಿದ ಸಿದ್ದಾರ್ಥ್ ಅವಹೇಳನಕಾರಿ ಪದವನ್ನ ಬಳಸಿದ್ದರು. ಸಿದ್ದಾರ್ಥ್ ಟ್ವೀಟ್ಗೆ ವ್ಯಾಪಕ ವಿರೋಧ ಕೇಳಿಬಂದಿದ್ದು ಸಿದ್ದಾರ್ಥ್ ಟ್ವಿಟರ್ ಖಾತೆಯನ್ನ ನಿಷೇದಿಸುವಂತೆಯೇ ರಾಷ್ಟ್ರೀಯ ಮಹಿಳಾ ಆಯೋಗ ಪತ್ರ ಬರೆದಿತ್ತು. ಇದೀಗ ಸಿದ್ದಾರ್ಥ್ ಪತ್ರದ ಮೂಲಕ ಬಹಿರಂಗ ಕ್ಷಮೆ ಯಾಚಿಸಿದ್ದಾರೆ.
ನಟ ಸಿದ್ದಾರ್ಥ್ ಕ್ಷಮಾಪಣ ಟ್ವೀಟ್ಗೆ ಪ್ರತಿಕ್ರಿಯಿಸಿದ ಸೈನಾ ನೆಹ್ವಾಲ್ ಸಿದ್ದಾರ್ಥ್ ಮೊದಲು ನನ್ನ ಬಗ್ಗೆ ಟ್ವೀಟ್ ಮಾಡಿ ನಂತರ ಕ್ಷಮಾಪಣೆ ಕೋರಿದರು. ಆ ಟ್ವೀಟ್ ಯಾಕೆ ಅಷ್ಟೊಂದು ವೈರಲ್ ಆಯ್ತು ಅನ್ನೋದು ನನಗೆ ಗೊತ್ತಿಲ್ಲ. ಟ್ವೀಟರ್ನಲ್ಲಿ ಟ್ರೆಂಡ್ ಆಗುತ್ತಿರುವುದು ನೋಡಿ ನನಗೆ ಆಶ್ಚರ್ಯವಾಯಿತು. ಸಿದ್ದಾರ್ಥ್ ಕ್ಷಮೆ ಕೇಳಿದ್ದಕ್ಕೆ ಸಂತಸವಾಗಿದೆ ಎಂದು ಸೈನಾ ಪ್ರತಿಕ್ರಿಯಿಸಿದ್ದಾರೆ.