ENTERTAINMENT:
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಸುಮಾರು 3 ವರ್ಷಗಳ ಹಿಂದೆ ಮದುವೆಯಾದರು. ಅಂದಿನಿಂದ ದಂಪತಿಗಳು ಸಿಹಿ ಸುದ್ದಿ ನೀಡಿರಲಿಲ್ಲ. ಅಭಿಮಾನಿಗಳು ಕೂಡ ಇವರಿಂದ ಸಿಹಿಸುದ್ಧಿ ಕೇಳಲು ಕಾತುರದಿಂದ ಕಾಯುತ್ತಿದ್ದಾರೆ.
ಇದೀಗ ನಟಿ ದೀಪಿಕಾ ಅವರು ಗರ್ಭಿಣಿ ಎಂಬ ಸುದ್ದಿ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಇದಕ್ಕೆ ಕಾರಣವೇನೆಂದರೆ ಇತ್ತೀಚೆಗೆ ನಟಿ ದೀಪಿಕಾ ಮತ್ತು ರಣವೀರ್ ಅವರು ಮುಂಬೈನ ಹಿಂದುಜಾ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಫೋಟೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೀಗಾಗಿ ದೀಪಿಕಾ ಪಡುಕೋಣೆ ಅವರು ಗರ್ಭಿಣಿ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.
ದೀಪಿಕಾ ಪಡುಕೋಣೆಯವರು ನಾಗ್ ಅಶ್ವಿನ್ ಅವರ ನಿರ್ದೇಶನದ ಪ್ರಭಾಸ್ ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದರಲ್ಲಿ ಅಮಿತಾಬ್ ಬಚ್ಚನ್ ಅವರು ಪ್ರಮುಖ ಪಾತ್ರದಲ್ಲಿದ್ದಾರೆ ಎನ್ನಲಾಗಿದೆ.