ಈ ಕ್ಷಣ :

ಸುಶಾಂತ್ ಸಿಂಗ್ ರಜಪೂತ್ ಸಾವು; ಪ್ರಕರಣಕ್ಕೆ ಈಗ ಮತ್ತೊಂದು ತಿರುವು

Published 15 ಮಾರ್ಚ್ 2023, 21:47 IST
Last Updated 6 ಮೇ 2023, 20:51 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ENTERTAINMENT: ಬಾಲಿವುಡ್ ರಂಗದಲ್ಲಿನ ಪಕ್ಷಪಾತ ಧೋರಣೆಯ ಬಲಿಪಶುವಾಗಿ ಖಿನ್ನತೆಗೊಳಗಾಗಿದ್ದ, ಕಡೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿ, ಎನ್‌ಸಿಬಿ ಪೊಲೀಸರು ಸುಶಾಂತ್ ಸಿಂಗ್ ಸ್ನೇಹಿತ ಹಾಗೂ ಫ್ಯ್ಲಾಟ್‌ಮೇಟ್ ಆಗಿದ್ದ ಸಿದ್ಧಾರ್ಥ್ ಪಿಥಾಣಿಯನ್ನು ಬಂಧಿಸಿರುವುದು ಪ್ರಕರಣದ ಬಗ್ಗೆ ಕುತೂಹಲ ಹೆಚ್ಚಿಸಿದೆ. ಸುಶಾಂತ್ ಮೃತಪಟ್ಟು ವರ್ಷ ಕಳೆಯುತ್ತಿರುವ ಹೊತ್ತಲ್ಲಿನ ಈ ಬೆಳವಣಿಗೆ ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ. ಸುಶಾಂತ್ ಸಾವಿಗೆ ಇದುವರೆಗೂ ನಿಖರವಾದ ಕಾರಣವನ್ನು ಭೇದಿಸುವಲ್ಲಿ ಪೊಲೀಸರು ಮತ್ತು ಸಿಬಿಐ ಯಶಸ್ವಿಯಾಗಿರದ ಹಿನ್ನೆಲೆಯಲ್ಲಿ ಈ ಅನುಮಾನ ವ್ಯಕ್ತವಾಗಿದೆ. ಸುಶಾಂತ್ ಸಿಂಗ್ ಸಾವಿಗೂ ಮುನ್ನ ಫ್ಲ್ಯಾಟ್‌ನಲ್ಲಿ ಇದ್ದ ನಾಲ್ವರಲ್ಲಿ ಒಬ್ಬರಾಗಿದ್ದ ಸಿದ್ಧಾರ್ಥ್ ಪಿಥಾಣಿಯನ್ನು ಹೈದರಾಬಾದ್‌ನಲ್ಲಿ ಎನ್‌ಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೊದಲೇ ಮುಂಬೈ ಪೊಲೀಸರು, ಸಿಬಿಐ ಅಧಿಕಾರಿಗಳು ಸುಶಾಂತ್ ಸಾವಿಗೆ ಸಂಬಂಧಿಸಿದಂತೆ ಸಿದ್ದಾರ್ಥ್ ಪಿಥಾನಣಿಯನ್ನು ಹಲವು ಬಾರಿ ವಿಚಾರಣೆ ನಡೆಸಿದ್ದರು. ಇದೀಗ ವರ್ಷದ ಬಳಿಕ ಸಿದ್ಧಾರ್ಥ್ ಬಂಧನವಾಗಿದೆ. 2020ರ ಜೂನ್ 14ರಂದು ಮುಂಬೈನ ಫ್ಲ್ಯಾಟ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ಶವ ಪತ್ತೆಯಾಗಿತ್ತು. ಅನುಮಾನಸ್ಪಾದ ಸಾವು ಎಂಬ ಕಾರಣಕ್ಕೆ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಸ್ನೇಹಿತರು, ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದರು. ಬಳಿಕ, ಈ ಕೇಸ್‌ ಸಿಬಿಐಗೆ ವರ್ಗಾವಣೆಯಾಗಿತ್ತು. ಸಿದ್ಧಾರ್ಥ್ ಸಾವಿನ ಬಳಿಕ ಬೆಳಕಿಗೆ ಬಂದಿದ್ದ ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ರಿಯಾ ಚಕ್ರವರ್ತಿ, ಸಹೋದರರ ಶೌವಿಕ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಈಗ ಸಿದ್ಧಾರ್ಥ್ ಪಿಥಾಣಿ ಬಂಧನವಾಗಿದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45