ENTERTAINMENT:
ಬೆಂಗಳೂರು : ತಜ್ಞರ ಜೊತೆ ಚರ್ಚಿಸಿ ಶೀಘ್ರದಲ್ಲೇ ಸಿನಿಮಾ ಥಿಯೇಟರ್ಗಳಿಗೆ ಶೇ. 100 ರಷ್ಟು ಸೀಟುಗಳ ಭರ್ತಿಗೆ ಅನುಮತಿ ನೀಡಲಾಗುವುದು. ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಒಂದು ಪರ್ಸೆಂಟ್ಗಿಂತ ಕಡಿಮೆ ಇದೆ. ಎಲ್ಲದ್ದನ್ನೂ ಗಣನೆಗೆ ತೆಗೆದುಕೊಂಡು ನಿರ್ಧಾರ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ ಕೆ.ಸುಧಾಕರ್ ಹೇಳಿದ್ದಾರೆ.
ನಿರ್ಮಾಪಕರು, ಪ್ರದರ್ಶಕರು ಹಾಗೂ ಚಲನಚಿತ್ರ ಮಂಡಳಿ ನಷ್ಟದಲ್ಲಿರುವುದರಿಂದ ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡು ಪಾಸಿಟಿವ್ ಆಗಿ ವಿಚಾರ ಮಾಡಿದ್ದೇವೆ. ಅವರಿಗೆ ಪೂರಕವಾದ ನಿರ್ಧಾಕ ತೆಗೆದುಕೊಳ್ಳುತ್ತೇವೆ. ರಾಜ್ಯದ ಜನರೂ ಸಹ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿಸಿದರು.
ಕಳೆದ ಎರಡು ದಿನಗಳ ಹಿಂದೆ ನಿರ್ಮಾಪಕರಾದ ಜಯಣ್ಣ, ಸೂರಪ್ಪ ಬಾಬು, ಕೆ.ಪಿ ಶ್ರೀಕಾಂತ್ ಅವರು ಆರೋಗ್ಯ ಸಚಿವ ಕೆ. ಸುಧಾರಕರ್ ಅವರನ್ನು ಭೇಟಿಯಾಗಿ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಸೀಟು ಭರ್ತಿಗೆ ಅವಕಾಶ ನೀಡುವಂತೆ ಮನವಿ ಪತ್ರ ಸಲ್ಲಿಸಿತ್ತು.
ದೊಡ್ಡ ನಟರ ಸಿನಿಮಾಗಳಿಗೆ ಹೆಚ್ಚು ಹಣ ಹಾಕಿ ಚಿತ್ರ ಬಿಡುಗಡೆ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದೇವೆ. ಈಗ ಕೊರೊನಾ ದಿನೇ ದಿನೇ ಕಡಿಮೆಯಾಗುತ್ತಿದೆ. ಹಾಗಾಗಿ ಪೂರ್ಣಪ್ರಮಾಣದ ಸೀಟು ಭರ್ತಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.