LATEST:
ಮುಂಬೈ: ಡ್ರಗ್ ಪ್ರಕರಣದಲ್ಲಿ ಜೈಲಿನಲ್ಲಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ ಜಾಮೀನು ಅರ್ಜಿಯನ್ನು, ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಆರ್ಯನ್ ಖಾನ್ ಅಕ್ಟೋಬರ್ 8 ರಿಂದಲೂ ಜೈಲುವಾಸ ಅನುಭವಿಸುತಿದ್ದು, ಇದೀಗ ಆರ್ಯನ್ ಖಾನ್ ಸೇರಿದಂತೆ ಮೂವರ ಜಾಮೀನು ಅರ್ಜಿಯನ್ನು ಮುಂಬೈನ ಎನ್ ಡಿ ಪಿಎಸ್ ವಜಾಗೊಳಿಸಿ ತೀರ್ಪು ನೀಡಿದೆ.
ಮುಂಬೈನ ಕಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದಂತ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು.
ಎನ್ ಡಿ ಪಿಎಸ್ ವಿಶೇಷ ಕೋರ್ಟ್ ಆರ್ಯನ್ ಖಾನ್, ಅರ್ಬಜ್ ಮರ್ಚೆಂಟ್ ಹಾಗೂ ಮನ್ಮುಡು ದಮಚ್ಚಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ.