LIFESTYLE: - ಪವಿತ್ರಾ ಕೊರೊನಾ ಸಾಂಕ್ರಾಮಿಕ ರೋಗ ಹೆಚ್ಚಾಗಿ ಹರಡುತ್ತಿದೆ. ಈ ರೋಗದಿಂದ ರಕ್ಷಿಸಿಕೊಳ್ಳಲು ಜನರು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಅದರ ಜೊತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಹಾಗಾಗಿ ಕೊರೊನಾ ವೈರಸ್ ನಿಂದ ರಕ್ಷಿಸಿಕೊಳ್ಳಲು ಬ್ಯಾಕ್ಟೀರಿಯಾ ವಿರೋಧಿ ಆಹಾರಗಳನ್ನು ಸೇವಿಸುವುದು ಅಗತ್ಯ. ಹಾಗಾಗಿ ನಿಮ್ಮ ಮನೆಯ ಅಡುಗೆ ಮನೆಯಲ್ಲಿಯೇ ಸಿಗುವಂತಹ ಈ ಆ್ಯಂಟಿ ಬ್ಯಾಕ್ಟೀರಿಯಲ್ ಆಹಾರಗಳನ್ನು ಸೇವಿಸಿ. ಕರಿಮೆಣಸು: ಇದು ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದ್ದು, ರೋಗ ನಿರೋಧ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ದಿನಕ್ಕೆ 4 ಗ್ರಾಂನಷ್ಟು ಕರಿಮೆಣಸನ್ನು ಸೇವಿಸಿ. ಆದರೆ ಅತಿಯಾಗಿ ಸೇವಿಸಿದರೆ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತದೆ. ಅರಿಶಿನ: ಅರಿಶಿನದಲ್ಲಿ ಕಂಡುಬರುವ ಕರ್ಕ್ಯುಮಿನ್ ಆ್ಯಂಟಿ ವೈರಲ್ ಮತ್ತು ಉರಿಯೂತದ ಗುಣಗಳನ್ನು ಹೊಂದಿದೆ. ಇದು ರೋಗ ನಿರೋಧಕ ಶಕ್ತಿಯನ್ನ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಹಾಗಾಗಿ ಅರಿಶಿನವನ್ನು ಹಾಲು ಅಥವಾ ನೀರಿನಲ್ಲಿ ಮಿಕ್ಸ್ ಮಾಡಿ ಕುಡಿಯಿರಿ. ಶುಂಠಿ: ಶುಂಠಿಯಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣ ಅಧಿಕವಾಗಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ರೋಗಗಳ ವಿರುದ್ಧ ಹೋರಾಡುತ್ತದೆ. ಮತ್ತು ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡುತ್ತದೆ. ಬೆಳ್ಳುಳ್ಳಿ : ಬೆಳ್ಳುಳ್ಳಿಯಲ್ಲಿ ಕೂಡ ಆ್ಯಂಟಿ ಮೈಕ್ರೊಬಿಯಲ್ ಗುಣಗಳಿವೆ. ಇದು ರೋಗಗಳ ವಿರುದ್ದ ಹೋರಾಡಲು ದೇಹಕ್ಕೆ ಸಹಾಯ ಮಾಡುತ್ತದೆ. ಇದು ಶ್ವಾಸಕೋಶವನ್ನು ಬ್ಯಾಕ್ಟೀರಿಯಗಳಿಂದ ರಕ್ಷಿಸುತ್ತದೆ. ಹಾಗಾಗಿ ಬೆಳ್ಳುಳ್ಳಿಯನ್ನು ನೀರಿನಲ್ಲಿ ಕುದಿಸಿ ಸೇವಿಸಿ. ಶುಂಠಿ, ಬೆಳ್ಳುಳ್ಳಿ, ಅರಿಶಿನ, ಕಾಳುಮೆಣಸು,