ಉರಿ ಮೂತ್ರವಿದ್ದಲ್ಲಿ ಏಲಕ್ಕಿ ಪುಡಿಯ ಜೊತೆ ನೆಲ್ಲಿಕಾಯಿ ಪುಡಿಯನ್ನು ಬೆರೆಸಿ ಸೇವಿಸಿದರೆ ಉರಿ ಮೂತ್ರ ಕಡಿಮೆ ಯಾಗುತ್ತದೆ.
ಏಲಕ್ಕಿ ಪುಡಿಗೆ ಜೇನುತುಪ್ಪವನ್ನು ಸೇರಿಸಿ ಸೇವಿಸಿದರೆ ಬಾಯಿಹುಣ್ಣು ಗುಣವಾಗುತ್ತದೆ.
ಏಲಕ್ಕಿಯ ಎಲೆ ಮತ್ತು ಬೇರಿನ ಕಷಾಯವನ್ನು ಸೇವಿಸಿದರೆ ಭೇದಿ ನಿಲ್ಲುತ್ತದೆ.
ಹೊಟ್ಟೆ ನೋವಿದ್ದಲ್ಲಿ ಏಲಕ್ಕಿ ಪುಡಿಯನ್ನು ಹಿಪ್ಪಲಿ ಬೇರಿನ ಪುಡಿ ಮತ್ತು ತುಪ್ಪದ ಜೊತೆ ಸೇವಿಸಿದರೆ ಹೊಟ್ಟೆ ನೋವು ನಿವಾರಣೆಯಾಗುತ್ತದೆ.
ರಕ್ತಹೀನತೆ ಇದ್ದಲ್ಲಿ, ಒಂದು ಚಿಟಿಕೆ ಏಲಕ್ಕಿ ಪುಡಿ ಮತ್ತು ಒಂದು ಚಮಚ ಅರಿಶಿನದ ಪುಡಿಯನ್ನು ಒಂದು ಲೋಟ ಹಾಲಿನೊಂದಿಗೆ ಸೇರಿಸಿ ರಾತ್ರಿ ಮಲಗುವ ಮುನ್ನ ಸೇವಿಸಿದರೆ ರಕ್ತಹೀನತೆ ನಿವಾರಣೆಯಾಗುತ್ತದೆ. ವಾತ, ಪಿತ್ತ, ಕಾಫ್ ದಂತ ರೋಗ ಮತ್ತು ಬಾಯಿ ವಾಸನೆ ನಿವಾರಣೆಗೆ ಏಲಕ್ಕಿ ಉತ್ತಮ ಪರಿಹಾರ.