NEWS:
ನವದೆಹಲಿ: ಇಂದು ಕೇಂದ್ರ ಬಜೆಟ್ ಮಂಡನೆ. ಇದಕ್ಕೂ ಮುನ್ನವೇ ಜನರಿಗೆ ಸಿಹಿ ಸುದ್ದಿ ನೀಡಿದೆ. ತೈಲ ಕಂಪನಿಯ ಕಮರ್ಷಿಯಲ್ ಸಿಲಿಂಡರ್ ಬೆಲೆಗಳನ್ನು ಇಳಿಕೆಗೊಳಿಸಿದೆ. ಆಯಾ ನಗರಗಳಿಗೆ ತಕ್ಕಂತೆ ಕಮರ್ಷಿಯಲ್ ಸಿಲಿಂಡರ್ ದರವನ್ನು ಕಡಿತಗೊಳಿಸಿದೆ.
19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,907 ರೂಪಾಯಿ ಆಗಿದೆ. ಡಿಸೆಂಬರ್ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು.
ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನಿರಾಳತೆ ಮೂಡಿಸಿದೆ. ಡಿಸೆಂಬರ್ 1ರಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆಯಾಗಿತ್ತು.