ಅಮಿತ್‌ ಶಾ ಜತೆ ಚುನಾವಣೆ ತಂತ್ರ ಚರ್ಚೆ: ಬಿ.ಎಸ್‌.ಯಡಿಯೂರಪ್ಪ

ಅಮಿತ್‌ ಶಾ ಜತೆ ಚುನಾವಣೆ ತಂತ್ರ ಚರ್ಚೆ: ಬಿ.ಎಸ್‌.ಯಡಿಯೂರಪ್ಪ

ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜತೆ ರಾಜ್ಯ ರಾಜಕಾರಣದ ಕುರಿತು ಚರ್ಚಿಸಲಾಗಿದ್ದು, ಚುನಾವಣಾ ಪ್ರಚಾರ ಕಾರ್ಯದ ತಂತ್ರಗಾರಿಕೆ ಬಗ್ಗೆ ಸಮಾಲೋಚನೆ ನಡೆಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು (ಏ.23): ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜತೆ ರಾಜ್ಯ ರಾಜಕಾರಣದ ಕುರಿತು ಚರ್ಚಿಸಲಾಗಿದ್ದು, ಚುನಾವಣಾ ಪ್ರಚಾರ ಕಾರ್ಯದ ತಂತ್ರಗಾರಿಕೆ ಬಗ್ಗೆ ಸಮಾಲೋಚನೆ ನಡೆಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಶಿಕಾರಿಪುರಕ್ಕೆ ತೆರಳುವ ಮುನ್ನ ಶನಿವಾರ ಕಾವೇರಿ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ರಾಜ್ಯದತ್ತ ಹೆಚ್ಚಿನ ಗಮನ ಹರಿಸುವುದಾಗಿ ಹೇಳಿದ್ದಾರೆ. ಪ್ರಚಾರ ಕಾರ್ಯಕ್ಕೆ ಹೆಚ್ಚಿನ ಸಮಯ ನೀಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಇದ್ದು, ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. 

ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜತೆ ರಾಜ್ಯ ರಾಜಕಾರಣದ ಕುರಿತು ಮಾತುಕತೆ ನಡೆಸಲಾಗಿದೆ. ಈ ವೇಳೆ ಹಲವು ಸಲಹೆಗಳನ್ನು ನೀಡಿದ್ದಾರೆ ಎಂದರು. ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೆಚ್ಚು ಬಾರಿ ಬರಲಿದ್ದಾರೆ. ಪ್ರಚಾರದಲ್ಲಿ ಭಾಗಿಯಾಗಲು ಹೆಚ್ಚಿನ ಸಮಯ ಮೀಸಲಿಟ್ಟಿದ್ದಾರೆ. ರಾಜ್ಯದ ಜನತೆ ನಮ್ಮ ಜತೆ ಇದ್ದಾರೆ. ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಶಿವಮೊಗ್ಗ ಪ್ರವಾಸದ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ. ರಾಜ್ಯದ ಪ್ರತಿ ವಿಧಾನಸಭೆ ಕ್ಷೇತ್ರಗಳಿಗೂ ಹೋಗಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳುತ್ತೇನೆ ಎಂದರು.