ಎಚ್‌ಡಿಕೆಗೆ ಅನಾರೋಗ್ಯ: ಮಣಿಪಾಲ್‌ ಆಸ್ಪತ್ರೆಗೆ ದಾಖಲು! ?

ಎಚ್‌ಡಿಕೆಗೆ ಅನಾರೋಗ್ಯ: ಮಣಿಪಾಲ್‌ ಆಸ್ಪತ್ರೆಗೆ ದಾಖಲು! ?

ವಿಧಾನಸಭಾ ಚುನಾವಣೆಗೆ ನಿರಂತರ ಪ್ರಚಾರ ಕೈಗೊಳ್ಳಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರದ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. 

ಬೆಂಗಳೂರು (ಏ.23): ವಿಧಾನಸಭಾ ಚುನಾವಣೆಗೆ ನಿರಂತರ ಪ್ರಚಾರ ಕೈಗೊಳ್ಳಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರದ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಶನಿವಾರ ರಾತ್ರಿ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚುನಾವಣಾ ಕಣ ಕಾವೇರಿದ್ದು, ಭಾನುವಾರದಿಂದ ಮೇ 8ರವರೆಗೆ ನಿರಂತರವಾಗಿ ಜೆಡಿಎಸ್‌ ಪರ ಪ್ರಚಾರದಲ್ಲಿ ತೊಡಗಲು ಕುಮಾರಸ್ವಾಮಿ ತೀರ್ಮಾನಿಸಿದ್ದರು. ಆದರೆ, ಅಭ್ಯರ್ಥಿ ಅಂತಿಮಗೊಳಿಸುವ ಕಾರ್ಯ ಮತ್ತು ನಿರಂತರ ರಾಜ್ಯ ಪ್ರವಾಸ ಹಿನ್ನೆಲೆಯಲ್ಲಿ ಆಯಾಸಗೊಂಡಿದ್ದ ಕುಮಾರಸ್ವಾಮಿ ಶನಿವಾರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ವಿಶ್ರಾಂತಿ ಪಡೆದುಕೊಂಡರು. 

ಬಳಿಕ ಸಣ್ಣ ಪ್ರಮಾಣದಲ್ಲಿ ಲಂಗ್ಸ್  ಇನ್ಪೆಕ್ಷನ್, ಡಸ್ಟ್ ಅಲರ್ಜಿ ಹಾಗೂ ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಸ್ಪೆಷಲ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ. ಡಾ.ಸತ್ಯನಾರಾಯಣ್‌ ಕುಮಾರಸ್ವಾಮಿಗೆ  ಚಿಕಿತ್ಸೆಯನ್ನು ಮುಂದುವರೆಸಿದ್ದಾರೆಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಇಂದು ನಿಖಿಲ್ ಕುಮಾರಸ್ವಾಮಿ  ಆಸ್ಪತ್ರೆಗೆ ಭೇಟಿ ಕೊಟ್ಟು ತಂದೆ ಆರೋಗ್ಯ ವಿಚಾರಿಸಲಿದ್ದಾರೆ.  ಮಧ್ಯಾಹ್ನದ ವೇಳೆ ಡಯಾಲಿಸಸ್‌ಗೆ ಮಣಿಪಾಲ್ ಆಸ್ಪತ್ರೆಗೆ ಬರಲಿರೋ ಎಚ್ ಡಿ ದೇವೇಗೌಡರು ಬರುತ್ತಿದ್ದು, ಆಸ್ಪತ್ರೆ ಬಳಿ ಯಾರೂ ಬರದಂತೆ ಎಚ್‌ಡಿಕೆ ಸೂಚನೆ ಕೊಟ್ಟಿದ್ದಾರೆ. ನಾಳೆ ಸಂಜೆ ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಚಾರ್ಜ್ ಆಗುವ ಬಗ್ಗೆ ಮಣಿಪಾಲ್ ಆಸ್ಪತ್ರೆ ಉನ್ನತ ಮೂಲಗಳಿಂದ ಮಾಹಿತಿ ಬಂದಿದೆ.