ಜಗದೀಶ್‌ ಶೆಟ್ಟರ್‌ ಸೇರ್ಪಡೆ ಕಾಂಗ್ರೆಸ್ಸಿಗೆ ಆನೆ ಬಲ: ರಣದೀಪ್‌ ಸಿಂಗ್‌ ಸುರ್ಜೇವಾಲಾ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಬಳಿಕ ಇದೇ ಮೊದಲ ಬಾರಿಗೆ ಶೆಟ್ಟರ್‌ ನಿವಾಸಕ್ಕೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪಸಿಂಗ್‌ ಸುರ್ಜೇವಾಲಾ ಭೇಟಿ ನೀಡಿದರು.

ಹುಬ್ಬಳ್ಳಿ (ಏ.21): ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಬಳಿಕ ಇದೇ ಮೊದಲ ಬಾರಿಗೆ ಶೆಟ್ಟರ್‌ ನಿವಾಸಕ್ಕೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪಸಿಂಗ್‌ ಸುರ್ಜೇವಾಲಾ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಪಕ್ಷಕ್ಕೆ ಶೆಟ್ಟರ್‌ ಬಂದಿರುವುದು ಆನೆ ಬಲಬಂದಂತಾಗಿದೆ ಎಂದರು.

ಬಿಜೆಪಿಗೆ ಲಿಂಗಾಯತರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರನ್ನು ಕೀಳಾಗಿ ಕಾಣುವುದೇ ಅಜೆಂಡಾ ಎಂದು ಕಿಡಿಕಾರಿದ ಅವರು, ಪಕ್ಷವನ್ನು ಕಟ್ಟಿಬೆಳೆಸಲು ಹಗಲಿರಳು ಶ್ರಮಿಸಿದವರನ್ನು ಮೂಲೆಗುಂಪು ಮಾಡುವ ಮೂಲಕ ಅಪಮಾನಿಸುತ್ತಿದೆ. ಈ ಮೂಲಕ ಬಿಜೆಪಿಯು ತಾನು ತೋಡುವ ಖೆಡ್ಡಾಕ್ಕೆ ತಾನೇ ಬೀಳಲಿದೆ ಎಂಬುದನ್ನು ಅರ್ಥಮಾಡಿಕೊಳ್ಳಲಿ. ಇದನ್ನರಿತು ಈಗಲಾದರೂ ಅನ್ಯರಿಗೆ ಖೆಡ್ಡಾ ತೋಡುವುದನ್ನು ಬಿಟ್ಟು ಹಿರಿಯರನ್ನು ಗೌರವಿಸುವುದನ್ನು ಕಲಿಯಬೇಕು ಎಂದರು.