ಡಿಕೆಶಿ ವಿರುದ್ಧದ ಐಟಿ, ಇಡಿ ತನಿಖೆ ಬಗ್ಗೆ ಆತಂಕ: ಡಿಕೆಶಿ ನಾಮಪತ್ರ ಓಕೆ ಆದರೆ ಡಿಕೆಸು ವಾಪಸ್‌?

ಡಿಕೆಶಿ ವಿರುದ್ಧದ ಐಟಿ, ಇಡಿ ತನಿಖೆ ಬಗ್ಗೆ ಆತಂಕ: ಡಿಕೆಶಿ ನಾಮಪತ್ರ ಓಕೆ ಆದರೆ ಡಿಕೆಸು ವಾಪಸ್‌?

ಕನ​ಕ​ಪುರ ವಿಧಾ​ನ​ಸಭಾ ಕ್ಷೇತ್ರ​ದಲ್ಲಿ ಕಾಂಗ್ರೆಸ್‌ ಅಭ್ಯ​ರ್ಥಿ​ಯಾಗಿ ಕೆಪಿ​ಸಿಸಿ ಅಧ್ಯಕ್ಷ ಡಿ.ಕೆ.​ಶಿ​ವ​ಕು​ಮಾರ್‌ ನಾಮ​ಪತ್ರ ಸಲ್ಲಿ​ಸಿರುವ ನಡುವೆಯೇ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಂಸದ ಡಿ.ಕೆ.​ಸು​ರೇಶ್‌ ಕೂಡ ಕಾಂಗ್ರೆಸ್‌ ಅಭ್ಯ​ರ್ಥಿ​ಯಾಗಿ ಗುರುವಾರ ಉಮೇ​ದು​ವಾ​ರಿಕೆ ಸಲ್ಲಿ​ಸಿ​ದ್ದಾರೆ.

ಕನಕಪುರ (ಏ.21): ಕನ​ಕ​ಪುರ ವಿಧಾ​ನ​ಸಭಾ ಕ್ಷೇತ್ರ​ದಲ್ಲಿ ಕಾಂಗ್ರೆಸ್‌ ಅಭ್ಯ​ರ್ಥಿ​ಯಾಗಿ ಕೆಪಿ​ಸಿಸಿ ಅಧ್ಯಕ್ಷ ಡಿ.ಕೆ.​ಶಿ​ವ​ಕು​ಮಾರ್‌ ನಾಮ​ಪತ್ರ ಸಲ್ಲಿ​ಸಿರುವ ನಡುವೆಯೇ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಂಸದ ಡಿ.ಕೆ.​ಸು​ರೇಶ್‌ ಕೂಡ ಕಾಂಗ್ರೆಸ್‌ ಅಭ್ಯ​ರ್ಥಿ​ಯಾಗಿ ಗುರುವಾರ ಉಮೇ​ದು​ವಾ​ರಿಕೆ ಸಲ್ಲಿ​ಸಿ​ದ್ದಾರೆ. ಬೆಳಗ್ಗೆ ಚನ್ನ​ಪ​ಟ್ಟಣ ಕ್ಷೇತ್ರ​ದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗಂಗಾ​ಧರ್‌ ಅವರ ನಾಮ​ಪತ್ರ ಸಲ್ಲಿಕೆಯಲ್ಲಿ ಭಾಗಿ​ಯಾ​ಗಿದ್ದ ಡಿ.ಕೆ.ಶಿವಕುಮಾರ್‌ ಅವರ ಸೋದರನೂ ಆಗಿರುವ ಡಿ.ಕೆ.​ಸು​ರೇಶ್‌ ಮಧ್ಯಾ​ಹ್ನದ ವೇಳೆಗೆ ದಿಢೀರ್‌ ಕನ​ಕ​ಪುರ ತಾಲೂಕು ಕಚೇ​ರಿಗೆ ಆಗ​ಮಿಸಿ ಮೂರು ಸೆಟ್‌ ನಾಮಪತ್ರ ಸಲ್ಲಿಸಿದರು.

ಈ ಹಿಂದೆ ರಾಮನಗರದಲ್ಲಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಡಿ.ಕೆ.ಸುರೇಶ್‌ ಸ್ಪರ್ಧಿಸಲಿದ್ದಾರೆಂಬ ಸುದ್ದಿ ಹರಿದಾಡಿತ್ತು. ಆದರೆ, ನಂತರ ಅವರು ಅಂಥ ಸಾಧ್ಯತೆಯನ್ನು ತಳ್ಳಿಹಾಕಿದ್ದರು. ಇದೀಗ ದಿಢೀರ್‌ ಬೆಳವಣಿಗೆಯಲ್ಲಿ ಡಿ.ಕೆ.ಸುರೇಶ್‌ ಅವರು ಕನಕಪುರದಿಂದಲೇ ನಾಮಪತ್ರ ಸಲ್ಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಡಿ.ಕೆ.ಶಿವಕುಮಾರ್‌ ಅವರು ಇನ್ನೂ ಐಟಿ, ಇ.ಡಿ (ಜಾರಿ ನಿರ್ದೇಶನಾಲಯ) ಉರುಳಿನಿಂದ ಪಾರಾಗಿಲ್ಲ. ಬಿಜೆಪಿ ತಮ್ಮ ಸ್ಪರ್ಧೆಯನ್ನು ತಡೆಯಬಹುದು, ನಾಮಪತ್ರ ಅನೂರ್ಜಿತಗೊಳ್ಳಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಸೋದರನಿಂದಲೂ ನಾಮಪತ್ರ ಸಲ್ಲಿಸಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್‌ ಅವರ ಉಮೇದುವಾರಿಕೆ ಮಾನ್ಯಗೊಂಡಲ್ಲಿ ಡಿ.ಕೆ.ಸುರೇಶ್‌ ಅವರು ತಮ್ಮ ನಾಮಪತ್ರ ಹಿಂಪಡೆಯಲಿದ್ದಾರೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅಂತ್ಯ: ಒಟ್ಟು 3632 ಮಂದಿ ಕಣಕ್ಕೆ

ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ಕೊನೆ ದಿನವಾದ ಗುರುವಾರದಂದು ಗಾಲಿ ಕರುಣಾಕರರೆಡ್ಡಿ, ಪ್ರಕಾಶ್‌ ಖಂಡ್ರೆ, ಡಿ.ಕೆ.ಸುರೇಶ್‌, ಕಿಮ್ಮನೆ ರತ್ನಾಕರ್‌ ಸೇರಿದಂತೆ 1691 ಅಭ್ಯರ್ಥಿಗಳಿಂದ ಒಟ್ಟು 1934 ನಾಮಪತ್ರಗಳು ಸಲ್ಲಿಕೆಯಾಗಿವೆ. 

ಬೆಂಗಳೂರು (ಏ.21): ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ಕೊನೆ ದಿನವಾದ ಗುರುವಾರದಂದು ಗಾಲಿ ಕರುಣಾಕರರೆಡ್ಡಿ, ಪ್ರಕಾಶ್‌ ಖಂಡ್ರೆ, ಡಿ.ಕೆ.ಸುರೇಶ್‌, ಕಿಮ್ಮನೆ ರತ್ನಾಕರ್‌ ಸೇರಿದಂತೆ 1691 ಅಭ್ಯರ್ಥಿಗಳಿಂದ ಒಟ್ಟು 1934 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಧಿಸೂಚನೆ ಪ್ರಕಟವಾದ ದಿನದಿಂದ ಈವರೆಗೆ 3632 ಅಭ್ಯರ್ಥಿಗಳಿಂದ ಒಟ್ಟು 5102 ಉಮೇದುವಾರಿಕೆ ಸಲ್ಲಿಕೆಯಾದಂತಾಗಿದೆ. ಗುರುವಾರ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದ್ದರಿಂದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಭ್ಯರ್ಥಿಗಳ ದಂಡೇ ಸೇರಿತ್ತು. ಮಧ್ಯಾಹ್ನ 3 ಗಂಟೆಗೆ ಮುಕ್ತಾಯವಾಗಿದ್ದರಿಂದ ಅದಕ್ಕಿಂತ ಮುನ್ನ ಕಚೇರಿಯಿಂದ ಚೀಟಿ ಪಡೆದು ಸರದಿ ಸಾಲಿನಲ್ಲಿ ನಿಂತಿರುವುದು ಸಾಮಾನ್ಯವಾಗಿತ್ತು. 

ತಡರಾತ್ರಿಯವರೆಗೆ ನಾಮಪತ್ರಗಳು ಸಲ್ಲಿಕೆಯಾಗಿವೆ. ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸೋಮವಾರ ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ತಿಪಟೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಬಿ.ಸಿ.ನಾಗೇಶ್‌, ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್‌, ಬಸವನಬಾಗೇವಾಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಸ್‌.ಕೆ.ಬೆಳ್ಳುಬ್ಬಿ, ಹೆಬ್ಬಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಟ್ಟಾಜಗದೀಶ್‌ ಸೇರಿದಂತೆ ಹಲವು ಹುರಿಯಾಳುಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.