ಪ್ರವೀಣ್ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ – ನೆಟ್ಟಾರು ಮನೆಗೆ ಜೆ.ಪಿ.ನಡ್ಡಾ ಭೇಟಿ

ಪ್ರವೀಣ್ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ – ನೆಟ್ಟಾರು ಮನೆಗೆ ಜೆ.ಪಿ.ನಡ್ಡಾ ಭೇಟಿ

ಮಂಗಳೂರು: ಮತಾಂಧರಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು.

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ದಿ. ಪ್ರವೀಣ್ ನೆಟ್ಟಾರು ಮನೆಗೆ ನಡ್ಡಾ ಭೇಟಿ ನೀಡಿ ಮನೆಯ ಮುಂಭಾಗದಲ್ಲಿದ್ದ ಪ್ರವೀಣ್ ಭಾವಚಿತ್ರಕ್ಕೆ ಜೆ.ಪಿ.ನಡ್ಡಾ ಪುಷ್ಪಾರ್ಚನೆ ಮಾಡಿದರು. ನಂತರ ಕೆಲಕಾಲ ಪ್ರವೀಣ್ ಪೋಷಕರು ಹಾಗೂ ಪತ್ನಿ ನೂತನ ಜೊತೆ ಮಾತುಕತೆ ನಡೆಸಿದ್ದಾರೆ.