ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಪಡೆದಿಲ್ಲ: ಡಿ.ಕೆ.ಶಿವಕುಮಾರ್
ಶೋಭಕ್ಕ ನಿಮ್ಮ ಪಕ್ಷದವರಂತೆ ನಾವು 40 ಪರ್ಸೆಂಟ್ ಕಮಿಷನ್ ಪಡೆದಿಲ್ಲ. ನಿಮ್ಮ ಕಮಿಷನ್ ಸರ್ಕಾರದ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್, ನೆಹರೂ ಓಲೇಕಾರ್, ಮಾಡಾಳ್ ವಿರೂಪಾಕ್ಷಪ್ಪ, ಎಚ್. ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಅವರೇ ಸಾಕ್ಷಿ ನೀಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರು (ಏ.23): ‘ಶೋಭಕ್ಕ ನಿಮ್ಮ ಪಕ್ಷದವರಂತೆ ನಾವು 40 ಪರ್ಸೆಂಟ್ ಕಮಿಷನ್ ಪಡೆದಿಲ್ಲ. ನಿಮ್ಮ ಕಮಿಷನ್ ಸರ್ಕಾರದ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್, ನೆಹರೂ ಓಲೇಕಾರ್, ಮಾಡಾಳ್ ವಿರೂಪಾಕ್ಷಪ್ಪ, ಎಚ್. ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಅವರೇ ಸಾಕ್ಷಿ ನೀಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಟಿಕೆಟ್ ಅರ್ಜಿ ಜತೆಗೆ ಕಾಂಗ್ರೆಸ್ ಪಕ್ಷ 2 ಲಕ್ಷ ರು. ಸ್ವೀಕರಿಸಿದೆ. ಹೀಗಾಗಿ ಚುನಾವಣಾ ಆಯೋಗವು 223 ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕಾರ ಮಾಡಬೇಕು ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ನಾವು ಅರ್ಜಿ ಶುಲ್ಕ 5 ಸಾವಿರ ರು. ಹಾಗೂ ಪಕ್ಷದ ಕಟ್ಟಡಕ್ಕೆ ದೇಣಿಗೆಯಾಗಿ ಅಧಿಕೃತವಾಗಿ 2 ಲಕ್ಷ ರು. ಸಂಗ್ರಹಿಸಿದ್ದೇವೆ. ಮೊದಲು ನಿಮ್ಮ ಸರ್ಕಾರದಲ್ಲಿನ 40 ಪರ್ಸೆಂಟ್ ಕಮಿಷನ್ ಬಗ್ಗೆ ಮಾತನಾಡಿ ಎಂದು ತಿರುಗೇಟು ನೀಡಿದರು.